ರಾಜ್ಯ

ಸರೋದ್ ಮಾಂತ್ರಿಕ ರಾಜೀವ್ ತಾರಾನಾಥ್ ಗೆ ಹಂಪಿ ವಿಶ್ವವಿದ್ಯಾನಿಲಯದ 'ನಾಡೋಜ' ಗೌರವ

Raghavendra Adiga
ಹಂಪಿ: ಪ್ರಖ್ಯಾತ ಸರೋದ್ ವಾದಕ ರಾಜೀವ್ ತಾರಾನಾಥ್ ಅವರಿಗೆ ಹಂಪಿ ಕನ್ನಡ ವಿಶ್ವವಿದ್ಯಾನಿಲಯ ನಾಡೋಜ ಗೌರವ ನೀಡಲು ತೀರ್ಮಾನಿಸಿದೆ.
ಹಂಪಿ ಕನ್ನಡ ವಿಶ್ವವಿದ್ಯಾನಿಲಯದ  ಕುಲಪತಿ ಪ್ರೊ.ಮಲ್ಲಿಕಾ ಎಸ್.ಘಂಟಿ ಈ ಮಾಹಿತಿ ನೀಡಿದ್ದಾರೆ. ತಾರಾನಾಥ್ ಅವರಿಗೆ ನಾಡೋಜ ಗೌರವ ನೀಡಲು ರಾಜ್ಯಪಾಲರು ಒಪ್ಪಿಗೆ ಇತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.
ಸಂಗೀತ ಲೋಕದ ಧ್ರುವತಾರೆಗಳಲ್ಲೊಬ್ಬರಾದ ರಾಜೀವ್ ತಾರಾನಾಥ್ ಅಕ್ಟೋಬರ್ 17, 1932ರಂದು ಜನಿಸಿದರು.  ತಂದೆ ಪಂಡಿತ ತಾರಾನಾಥ್. ಇವರು  ಇಪ್ಪತ್ತರ ತಾರುಣ್ಯದಲ್ಲಿ ಆಕಾಶವಾಣಿಯಲ್ಲಿ ಸಂಗೀತಗಾರರಾಗಿ ಅನೇಕ ಕಾರ್ಯಕ್ರಮಗಳನ್ನು ನೀಡಿದ್ದಾರೆ. ಸಾಹಿತ್ಯದಲ್ಲಿ ಪಿ.ಎಚ್.ಡಿ ಪದವಿ ಪಡೆದಿದ್ದ ರಾಜೀವ್ ಕೋಲ್ಕತ್ತಾದ ಉಸ್ತಾದ್ ಅಲಿ ಅಕ್ಬರ್ ಖಾನರ ಶಿಷ್ಯರು.
ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದ ಕಲಾವಿಭಾಗದ ಮುಖ್ಯಸ್ಥರಾಗಿ 1995ರಿಂದ 2005ರ ಅವಧಿಯಲ್ಲಿ ಕಾರ್ಯನಿರ್ವಹಿಸಿದ್ದ ರಾಜೀವ ತಾರಾನಾಥರು ಇದೀಗ ಮೈಸೂರಿನಲ್ಲಿ ನೆಲೆಸಿದ್ದಾರೆ
ಅಖಿಲ ಭಾರತ ಸಂಗೀತ ನಾಟಕ ಅಕಾಡೆಮಿ ಗೌರವ, ಟಿ.ಚೌಡಯ್ಯ ಪ್ರಶಸ್ತಿ, ಪಂ. ಬಸವರಾಜ ರಾಜಗುರು ರಾಷ್ಟ್ರೀಯ ಟ್ರಸ್ಟ್ ನ "ರಾಷ್ಟ್ರೀಯ ಸಮ್ಮಾನ" ಗೌರವ ಇನ್ನೂ ಅನೇಕ ಪುರಸ್ಕಾರಗಳಿಗೆ ಇವರು ಭಾಜನರಾಗಿದ್ದಾರೆ.
SCROLL FOR NEXT