ಸಾಂದರ್ಭಿಕ ಚಿತ್ರ 
ರಾಜ್ಯ

ಮಾ. 22ಕ್ಕೆ ಮೆಟ್ರೊ ಬಂದ್‌: ನೌಕರರ ವಿರುದ್ಧ ಎಸ್ಮಾ ಜಾರಿಗೆ ಬಿಎಂಆರ್ ಸಿಎಲ್ ಚಿಂತನೆ

ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಮಾರ್ಚ್ 22ರಂದು ನಮ್ಮ ಮೆಟ್ರೊ ಬಂದ್ ಗೆ ನೌಕರರು ಕರೆ ನೀಡಿದೆ.

ಬೆಂಗಳೂರು: ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಮಾರ್ಚ್ 22ರಂದು ನಮ್ಮ ಮೆಟ್ರೊ ಬಂದ್ ಗೆ ನೌಕರರು ಕರೆ ನೀಡಿದೆ. ಆದರೆ ಮುಷ್ಕರ ನಡೆಸದಂತೆ ಬಿಎಂಆರ್ ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಮಹೇಂದ್ರ ಜೈನ್ ಅವರು ಗುರುವಾರ ಎಚ್ಚರಿಕೆ ನೀಡಿದ್ದಾರೆ.
ವೇತನ ಪರಿಷ್ಕರಣೆ, ಬಡ್ತಿ, ಕನ್ನಡಿಗ ನೌಕರರು ಹಾಗೂ ಹಿಂದಿ ನೌಕರರ ನಡುವೆ ತಾರತಮ್ಯ ನಿಲ್ಲಿಸುವುದು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಮೆಟ್ರೊ ನೌಕರರು ಮಾ.22 ರಂದು ಮುಷ್ಕರ ನಡೆಸಲು ತೀರ್ಮಾನಿಸಿದ್ದಾರೆ. ಆದರೆ ನೌಕರರ ಮುಷ್ಕರಕ್ಕೆ ಬ್ರೇಕ್ ಹಾಕಲು ಮುಂದಾಗಿರುವ ಬಿಎಂಆರ್ ಸಿಎಲ್, ಒಂದು ವೇಳೆ ಮುಷ್ಕರ ನಡೆಸಿದರೆ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಹೇಳುವ ಮೂಲಕ ಎಸ್ಮಾ ಜಾರಿಗೊಳಿಸುವ ಎಚ್ಚರಿಕೆ ನೀಡಿದೆ.
ನಮ್ಮ ಮೆಟ್ರೊ ನೌಕರರು ಸಾರ್ವಜನಿಕ ಸೇವೆಯಲ್ಲಿದ್ದು, ಯಾವುದೇ ಕಾರಣಕ್ಕೂ ಮುಷ್ಕರ ನಡೆಸುವಂತಲ್ಲಿ. ಸಾರ್ವಜನಿಕ ಸೇವೆಗೆ ತೊಂದರೆಯಾದರೆ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಮಹೇಂದ್ರ ಜೈನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಾರ್ಚ್ 22ರಂದು ಬೆಳಗ್ಗೆ 5 ಗಂಟೆಯಿಂದ ರಾತ್ರಿ 11 ಗಂಟೆವರೆಗೆ ಕೆಲಸ ಸ್ಥಗಿತಗೊಳಿಸುವ ಮೂಲಕ ಮುಷ್ಕರ ಹೂಡಲು ಬಿಎಂಆರ್‌ಸಿಎಲ್‌ ನೌಕರರ ಸಂಘ ನಿರ್ಧರಿಸಿದೆ. ನಿಯಮದ ಪ್ರಕಾರ 14 ದಿನ ಮುಂಚಿತವಾಗಿ ಬಿಎಂಆರ್‌ಸಿಎಲ್‌ ಆಡಳಿತ ಮಂಡಳಿಗೆ ಸೂಚನೆ ನೀಡಲಾಗಿದೆ. ಬೇಡಿಕೆಗಳನ್ನು ಈಡೇರಿಸದಿದ್ದರೆ ಮುಷ್ಕರ ನಡೆಸಲಾಗುವುದು ಎಂದು ಮೆಟ್ರೊ ನೌಕರರ ಸಂಘ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

5 ರಾಜ್ಯಗಳಿಗೆ ರಾಜ್ಯಪಾಲರ ನೇಮಕ; ಇವರೇ ಕರ್ನಾಟಕದ ನೂತನ ರಾಜ್ಯಪಾಲರು...

ವಿಡಿಯೋ ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿ ಕೋರ್ಟ್ ಮೆಟ್ಟಿಲೇರಿದ ಮಾಜಿ ಮುಖ್ಯಮಂತ್ರಿ!

ಸ್ಯಾಂಡಲ್‌ವುಡ್‌ನಲ್ಲಿ ಮತ್ತೊಂದು ವಿಚ್ಛೇದನ: 7 ವರ್ಷದ ದಾಂಪತ್ಯಕ್ಕೆ ಅಂತ್ಯವಾಡಿದ ಕನ್ನಡದ ಕಿರುತೆರೆ ನಟಿ!

CM ಡಿಕೆಶಿ​​ ಕುರ್ತಾ ಹಿಡಿದು ಹಿಂದೆ ತಳ್ಳಿದ ರಾಹುಲ್ ಗಾಂಧಿ: ವಿಡಿಯೋ ವೈರಲ್; ಬಂಡೆಗೆ ಸಿಕ್ಕ ಮರ್ಯಾದೆ! ಫುಲ್‌ ಅನ್‌ ರೆಸ್ಪೆಕ್ಟು!

ಕರ್ನಾಟಕ ಸೇರಿ 5 ರಾಜ್ಯಗಳಿಗೆ 2 ದಿನಗಳಲ್ಲಿ ಭಾರೀ ಮಳೆ: IMD ಎಚ್ಚರಿಕೆ