ರಾಜ್ಯ

ಲೋಕಾಯುಕ್ತರಿಗೆ ಚಾಕು ಇರಿತ: ಡಿಸಿಪಿ ಯೋಗೇಶ್ ಅಮಾನತು

Lingaraj Badiger
ಬೆಂಗಳೂರು: ಲೋಕಾಯುಕ್ತ ನ್ಯಾಯಮೂರ್ತಿ ಪಿ. ವಿಶ್ವನಾಥ್‌ ಶೆಟ್ಟಿ ಅವರಿಗೆ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ವಿಧಾನಸೌಧ ಭದ್ರತಾ ವಿಭಾಗದ ಪೊಲೀಸ್ ಉಪ ಆಯುಕ್ತ(ಡಿಸಿಪಿ) ಯೋಗೇಶ್ ಅವರನ್ನು ಗುರುವಾರ ಅಮಾನತು ಮಾಡಿದೆ.
ವಿಶ್ವನಾಥ್ ಶೆಟ್ಟಿ ಅವರ ಮೇಲಿನ ದಾಳಿಗೆ ಲೋಕಾಯುಕ್ತ ಕಚೇರಿಯ ಭದ್ರತಾ ಲೋಪವೇ ಕಾರಣ ಎಂದು ‌ನಗರ ಪೊಲೀಸ್ ಆಯುಕ್ತ ಟಿ. ಸುನೀಲ್‌ ಕುಮಾರ್ ಅವರು ಇಂದು ಗೃಹ ಇಲಾಖೆಗೆ ವರದಿ ನೀಡಿದ ಹಿನ್ನೆಲೆಯಲ್ಲಿ ಡಿಸಿಪಿ ಯೋಗೇಶ್ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.
ಪೊಲೀಸ್ ಆಯುಕ್ತರು ನೀಡಿದ ವರದಿ ಆಧರಿಸಿ ಯೋಗೇಶ್ ಅಮಾನತಿಗೆ ಗೃಹ ಸಚಿವ ರಾಮಲಿಂಗಾ ರೆಡ್ಡಿ ಅವರು ಆದೇಶಿಸಿದ್ದಾರೆ.
ನಿನ್ನೆ ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಅವರ ಹತ್ಯೆಗೆ ಯತ್ನಿಸಿದ್ದ ತೇಜ್ ರಾಜ್ ಶರ್ಮಾ, ಲೋಕಾಯುಕ್ತರಿಗೆ ಅವರ ಕಚೇರಿಯಲ್ಲಿ ಚಾಕುವಿನಿಂದ ಮೂರು ಬಾರಿ ಇರಿದಿದ್ದರು. ಗಂಭೀರವಾಗಿ ಗಾಯಗೊಂಡಿರುವ ಲೋಕಾಯುಕ್ತರು ಮಲ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
SCROLL FOR NEXT