ಸಾಂದರ್ಭಿಕ ಚಿತ್ರ 
ರಾಜ್ಯ

ಬಾಗಲಕೋಟೆ: ಎತ್ತಿನ ಗಾಡಿಗೆ ಲಾರಿ ಡಿಕ್ಕಿ, ಒಂದೇ ಕುಟುಂಬದ 9 ಮಂದಿ ಸಾವು

ಎತ್ತಿನ ಗಾಡಿಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಒಂಬತ್ತು ಮಂದಿ ಮೃತಪಟ್ಟ ದಾರುಣ ಘಟನೆ...

ಬಾಗಲಕೋಟೆ: ಎತ್ತಿನ ಗಾಡಿಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಒಂಬತ್ತು ಮಂದಿ ಮೃತಪಟ್ಟ ದಾರುಣ ಘಟನೆ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ರಕ್ಕಸಗಿ ಬಳಿ ಶುಕ್ರವಾರ ನಡೆದಿದೆ.
ಬೆಳಗಾವಿ–ರಾಯಚೂರು ರಾಜ್ಯ ಹೆದ್ದಾರಿಯಲ್ಲಿ ಈ ಭೀಕರ ಅಪಘಾತ ಸಂಭವಿಸಿದ್ದು, ಚಕ್ಕಡಿಗೆ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಏಳು ಮೃತಪಟ್ಟಿದ್ದಾರೆ ಮತ್ತು ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ಮೃತರನ್ನು ರಕ್ಕಸಗಿ ಗ್ರಾಮದ ಚಂದ್ರಯ್ಯ ಹಿರೇಮಠ ( 48), ಅವರ ಪತ್ನಿ ರತ್ನವ್ವ (46), ಪುತ್ರಿಯರಾದ ಕಾಶಿಬಾಯಿ ( 22), ವಿಜಯಲಕ್ಷ್ಮಿ ( 18), ಗ್ರಾಮಸ್ಥರಾದ ಸಿದ್ದಮ್ಮ ಹೂಗಾರ ( 58), ಗಂಗಮ್ಮ ಹೂಗಾರ ( 58), ಬಸವ್ವ ಗೊರವರ ( 56) ಎಂದು ಗುರುತಿಸಲಾಗಿದೆ.
ಗಂಭೀರವಾಗಿ ಗಾಯಗೊಂಡಿದ್ದ ಸಂಗನಬಸವ್ವ ಮಠ (68) ಹಾಗೂ ಗಂಗಮ್ಮ ಗೌಡರ (44) ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. 
ಹೊಲಕ್ಕೆ ತೊಗರಿ ರಾಶಿ ಮಾಡಲು ತೆರಳಿದ್ದರು. ಅಲ್ಲಿಂದ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದಾಗ ಎತ್ತಿನಗಾಡಿಗೆ ಲಾರಿ ಡಿಕ್ಕಿ ಹೊಡೆದಿದೆ.  ಭೀಕರ ಅಪಘಾತದಲ್ಲಿ ಒಂದು ಎತ್ತು ಕೂಡ ಸಾವಿಗೀಡಾಗಿದ್ದು, ಮತ್ತೊಂದು ತೀವ್ರವಾಗಿ ಗಾಯಗೊಂಡಿದೆ. ಹುನಗುಂದ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

ಶಿವಮೊಗ್ಗ: 10 ಕಿಲೋ ವ್ಯಾಟ್ FM ಟ್ರಾನ್ಸ್ಮಿಟರ್ ಕೇಂದ್ರ ಉದ್ಘಾಟನೆ! ಆಕಾಶವಾಣಿ, ದೂರದರ್ಶನ ಅಭಿವೃದ್ದಿಗೆ 2,500 ಕೋಟಿ ಹಣ ವೆಚ್ಚ- ಡಾ. ಎಲ್ ಮುರುಗನ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

SCROLL FOR NEXT