ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ 
ರಾಜ್ಯ

ಲೋಕಾಯುಕ್ತ ನ್ಯಾ.ವಿಶ್ವನಾಥ್ ಶೆಟ್ಟಿ ಆರೋಗ್ಯದಲ್ಲಿ ಚೇತರಿಕೆ; ವೈದ್ಯರು ಮಾಹಿತಿ

ದುರ್ಷರ್ಮಿಯ ಚೂರಿ ಇರಿತಕ್ಕೊಳಗಾಗಿದ್ದ ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿಯವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ ಎಂದು ವೈದ್ಯರು ಶುಕ್ರವಾರ ಮಾಹಿತಿ ನೀಡಿದ್ದಾರೆ...

ಬೆಂಗಳೂರು: ದುರ್ಷರ್ಮಿಯ ಚೂರಿ ಇರಿತಕ್ಕೊಳಗಾಗಿದ್ದ ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿಯವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ ಎಂದು ವೈದ್ಯರು ಶುಕ್ರವಾರ ಮಾಹಿತಿ ನೀಡಿದ್ದಾರೆ. 
ಈ ಕುರಿತಂತೆ ಮಾಹಿತಿ ನೀಡಿರುವ ಮಲ್ಯ ಆಸ್ಪತ್ರೆಯ ಹೃದಯ ತಜ್ಞ ದಿವಾಕರ್ ಭಟ್ ಅವರು, ಚೂರಿ ಇರಿತಕ್ಕೊಳಗಾಗಿದ್ದ ವಿಶ್ವನಾಥ್ ಶೆಟ್ಟಿಯವರಿಗೆ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ಇದೀಗ ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಮತ್ತೊಂದು ವಾರ ಅವರು ಆಸ್ಪತ್ರೆಯಲ್ಲಿರಬೇಕಾಗುತ್ತದೆ ಎಂದು ಹೇಳಿದ್ದಾರೆ. 
ಕಳೆದ ಬುಧವಾರ ಲೋಕಾಯುಕ್ತ ಕಚೇರಿಗೆ ಆಗಮಿಸಿದ್ದ ದುಷ್ಕರ್ಮಿಯೊಬ್ಬ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿಯವರಿಗೆ ಚೂರಿಯಿಂದ ಇರಿದಿದ್ದ. ಬಳಿಕ ನ್ಯಾಯಮೂರ್ತಿಗಳನ್ನು ಮಲ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. 
ಘಟನೆ ಬಳಿಕ ದುಷ್ಕರ್ಮಿಯನ್ನು ಪೊಲೀಸರು ಕೂಡಲೇ ಬಂಧನಕ್ಕೊಳಪಡಿಸಿದ್ದರು. ಪ್ರಕರಣದ ತನಿಖೆಯನ್ನು ಅಪರಾಧ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಎನ್. ಸತೀಶ್ ಕುಮಾರ್ ಅವರ ನೇತೃತ್ವದ ತಂಡ ತನಿಖೆ ನಡೆಸುತ್ತಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಜಮ್ಮು-ಕಾಶ್ಮೀರ: ಬುಡ್ಗಾಮ್‌ ಎನ್ ಕೌಂಟರ್ ನಲ್ಲಿ ಉಗ್ರನ ಹತ್ಯೆ; AK ರೈಫಲ್ ಮತ್ತಿತರ ಶಸ್ತ್ರಾಸ್ತ್ರಗಳು ವಶ!

ಈ ಬಾರಿಯ 'ಯುವ ದಸರಾ' ಉದ್ಘಾಟನೆಗೆ ಖ್ಯಾತ ನೃತ್ಯ ನಿರ್ದೇಶಕ ಪ್ರಭುದೇವಗೆ ಆಹ್ವಾನ!

India without Politics: ‘ಹನುಮಾನ್ ಅಂಶ್’ ನೋಡಲು ಚಪ್ಪಲಿ ಬಿಚ್ಚಿ ಕುಳಿತ ಮುಸ್ಲಿಂ ವ್ಯಕ್ತಿ; video ವೈರಲ್

10 ದಿನಗಳ ಬಳಿಕ ಸುರಂಗದಿಂದ ಕಾರ್ಮಿಕರ ಪವಾಡ ಸದೃಶ ರಕ್ಷಣೆ; ‘ಜಗತ್ತು ಈವರೆಗೆ ಕಂಡು ಕೇಳರಿಯದ ರಕ್ಷಣಾ ಕಾರ್ಯಾಚರಣೆ’; ತಜ್ಞ Arnold Dix

'ಭಾರತ ಕೂಡ ಸೋತಿದೆ' ಎಂದ PCB, ಮೊಹ್ಸಿನ್ ನಕ್ವಿಗೆ ಮುಟ್ಟಿ ನೋಡಿಕೊಳ್ಳುವಂತೆ ತಿರುಗೇಟು ಕೊಟ್ಟ Iceland Cricket Board