ರಾಜ್ಯ

ಜೈಲಿನಲ್ಲಿ ಜೈಶಂಕರ್ ಆತ್ಮಹತ್ಯೆ: ಬಂಧಿಖಾನೆ ಇಲಾಖೆಗೆ ಎನ್ ಎಚ್ ಆರ್ ಸಿ ನೋಟಿಸ್

Lingaraj Badiger
ಬೆಂಗಳೂರು: ಸೈಕೋ ಕಿಲ್ಲರ್, ಸರಣಿ ಅತ್ಯಾಚಾರಿ ಜೈಶಂಕರ್ ಪರಪ್ಪನ ಅಗ್ರಹಾರ ಜೈಲಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ(ಎನ್ ಎಚ್ ಆರ್ ಸಿ) ಶನಿವಾರ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ಜೈಶಂಕರ್ ಆತ್ಮಹತ್ಯೆಗೆ ಜೈಲು ಸಿಬ್ಬಂದಿಯ ನಿರ್ಲಕ್ಷ್ಯವೇ ಕಾರಣ ಎಂದು ಮಾಧ್ಯಮಗಳು ವರದಿ ಮಾಡಿದ ಹಿನ್ನೆಲೆಯಲ್ಲಿ ಸ್ವ.ಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿರುವ ಎನ್ ಎಚ್ ಆರ್ ಸಿ, ಕರ್ನಾಟಕ ಬಂಧಿಖಾನೆ ಇಲಾಖೆಗೆ ನೋಟಿಸ್ ಜಾರಿ ಮಾಡಿದೆ.
ಜೈಲು ಸಿಬ್ಬಂದಿಯ ನಿರ್ಲಕ್ಷ್ಯದಿಂದ ಜೈಶಂಕರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾಧ್ಯಮಗಳ ವರದಿಯನ್ನು ನಾವು ಪರಿಶೀಲಿಸಿದ್ದು, ಈ ಬಗ್ಗೆ ಸ್ಪಷ್ಟನೆ ನೀಡುವಂತೆ ಬಂಧಿಖಾನೆಗೆ ಸೂಚಿಸಿದೆ. ಅಲ್ಲದೆ ಈ ಕುರಿತು ಆರು ವಾರಗಳಲ್ಲಿ ವಿಸ್ತೃತ ವರದಿ ನೀಡುವಂತೆ ಪೊಲೀಸ್ ಮಹಾ ನಿರ್ದೇಶಕ(ಬಂಧಿಖಾನೆ)ರಿಗೂ ನೋಟಿಸ್ ನೀಡಿದೆ.
ಅತ್ಯಾಚಾರ ಹಾಗೂ ಕೊಲೆಗಳ ಮೂಲಕ ತಮಿಳುನಾಡು ಮತ್ತು ಕರ್ನಾಟಕದ ಜನರನ್ನು ಬೆಚ್ಚಿ ಬೀಳಿಸಿದ್ದ ವಿಕೃತಕಾಮಿ ಸೈಕೋ ಜೈಶಂಕರ್‌ ಅಲಿಯಾಸ್‌ ಜೈ ಶಂಕರ್‌ (38) ಕಳೆದ ತಿಂಗಳು ಪರಪ್ಪನ ಅಗ್ರಹಾರ ಜೈಲಿನಲ್ಲಿ ಬ್ಲೇಡ್‌ನಿಂದ ಕತ್ತು ಕೊಯ್ದುಕೊಂಡು ಆತ್ಮಹತ್ಯೆಮಾಡಿಕೊಂಡಿದ್ದಾನೆ.
SCROLL FOR NEXT