ರಾಜ್ಯ

ಮಹಿಳೆಯರ ರಕ್ಷಣೆಗಾಗಿ ಸರ್ಕಾರ ಏನೂ ಮಾಡಿಲ್ಲ: ಬೆಂಗಳೂರಿನಲ್ಲಿ ನಿರ್ಭಯಾ ತಾಯಿ ಹೇಳಿಕೆ

Shilpa D
ಬೆಂಗಳೂರು: ವಿವಿಧ ಸರ್ಕಾರಗಳು ಹಲವು ಬಗೆಯ ಪ್ರಚಾರ ಕಾರ್ಯ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡವು, ಆದರೆ ಮಹಿಳೆಯರ ಸುರಕ್ಷತೆಗೆ ಯಾವುದೇ ತಳ ಮಟ್ಟದ ಕೆಲಸಗಳು ನಡೆದಿಲ್ಲ ಎಂದು ನಿರ್ಭಯಾ ತಾಯಿ ಹೇಳಿದ್ದಾರೆ.
2012 ರ ಡಿಸೆಂಬರ್ ನಲ್ಲಿ ದೆಹಲಿಯಲ್ಲಿ ನಡೆದ ಮಾರಣಾಂತಿಕವಾಗಿ ಲೈಂಗಿಕ ದೌರ್ಜನ್ಯ ನಡೆಸಲಾಗಿತ್ತು. ಇದಾದ ಕೆಲವು ದಿನಗಳ ನಂತರ  ಚಿತಿತ್ಸೆ ಫಲಿಸದೇ ಸಾವನ್ನಪ್ಪಿದ್ದಳು. ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಭಾರತೀಯ ಆರ್ಥಿಕ ವ್ಯಾಪಾರ ಸಂಸ್ಥೆ ಮಹಿಳಾ ಘಟಕ ಏರ್ಪಡಿಸಿದ್ದ ಸಾಧಕಿಯರಿಗೆ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಮಾತನಾಡಿದ ನಿರ್ಭಯಾ ತಾಯಿ ಆಶಾ ದೇವಿ, ಸರ್ಕಾರ ಈಗಲಾದರೂ ಕಣ್ಣು ತೆರೆದು ನೋಡಬೇಕು. ಹಲವಾರು ಜಾಗೃತಿ, ಪ್ರಚಾರ ಕಾರ್ಯ ಹಮ್ಮಿಕೊಂಡಿದ್ದರು ಮಹಿಳೆಯರ ರಕ್ಷಣೆಗೆ ಯಾವುದೇ ಅಗತ್ಯ ಕ್ರಮ ಕೈಗೊಂಡಿಲ್ಲ ಎಂದು ಹೇಳಿದ್ದಾರೆ.
ಅಪರಾಧಿಗಳು ದೇಶದಲ್ಲಿ ಆರಾಮವಾಗಿ ಓಡಾಡಿಕೊಂಡಿದ್ದಾರೆ, ಪ್ರತಿಯೊಬ್ಬರಿಗೂ ನ್ಯಾಯ ದೊರಕಬೇಕು, ನಿರ್ಭಯಾ ಫಂಡ್ ಬಗ್ಗೆ ಮಾತನಾಡಿದ ಅವರು, ಭಾರತದ 983 ರೈಲ್ವೆ ನಿಲ್ದಾಣಗಳಲ್ಲಿ 19 ಸಾವಿರ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ  ಈ ಯೋಜನೆ ಯಶಸ್ವಿಯಾಗಿ ನಡೆದಿದೆ ಎಂದು ಹೇಳಿದ್ದಾರೆ.
SCROLL FOR NEXT