ಹೋಟೆಲ್ ಲಲಿತ್ ಅಶೋಕ್ ನಲ್ಲಿ ಜವಳಿ ಮೇಳವನ್ನು ಕೇಂದ್ರ ಜವಳಿ ಖಾತೆ ಸಚಿವೆ ಸ್ಮೃತಿ ಇರಾನಿ ಉದ್ಘಾಟಿಸಿದರು. 
ರಾಜ್ಯ

ಶೀಘ್ರದಲ್ಲಿಯೇ ಬೆಂಗಳೂರಿನಲ್ಲಿ ಗಾರ್ಮೆಂಟ್ ವಿಶ್ವವಿದ್ಯಾಲಯ ಸ್ಥಾಪನೆ- ಅನಂತ್ ಕುಮಾರ್

ಐಟಿ ಸಿಟಿ ಬೆಂಗಳೂರು ಶೀಘ್ರದಲ್ಲಿಯೇ ಗಾರ್ಮೆಂಟ್ ವಿಶ್ವವಿದ್ಯಾಲಯ ಪಡೆಯಲಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಅನಂತ್ ಕುಮಾರ್ ಹೇಳಿದ್ದಾರೆ.

ಬೆಂಗಳೂರು: ಐಟಿ ಸಿಟಿ ಬೆಂಗಳೂರು ಶೀಘ್ರದಲ್ಲಿಯೇ ಗಾರ್ಮೆಂಟ್ ವಿಶ್ವವಿದ್ಯಾಲಯ ಪಡೆಯಲಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಅನಂತ್ ಕುಮಾರ್ ಹೇಳಿದ್ದಾರೆ.

 ಅಂತಾರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಆಯೋಜಿಸಿದ್ದ RALLYಯಲ್ಲಿ ಮಾತನಾಡಿದ ಅವರು, ಬೊಮ್ಮನಹಳ್ಳಿಯಲ್ಲಿ ಹಲವು ಸಿದ್ಧ ಉಡುಪು ತಯಾರಿಕಾ ಕಾರ್ಖಾನೆಗಳಿದ್ದು, ಅಪಾರ ಪ್ರಮಾಣದ ಮಹಿಳೆಯರು ಉದ್ಯೋಗ ಮಾಡುತ್ತಿದ್ದಾರೆ. ಇಲ್ಲಿ ಗಾರ್ಮೆಂಟ್ ವಿಶ್ವವಿದ್ಯಾಲಯ ಸ್ಥಾಪಿಸುವ ಪ್ರಸ್ತಾವಕ್ಕೆ ಜವಳಿ ಖಾತೆ ಸಚಿವ ಸ್ಮೃತಿ ಇರಾನಿ ಅನುಮೋದನೆ ಸೂಚಿಸಿದ್ದು, ಶೀಘ್ರದಲ್ಲಿ ಈ ವಿಶ್ವವಿದ್ಯಾಲಯ ಸ್ಥಾಪಿಸಲಾಗುವುದು ಎಂದು ತಿಳಿಸಿದರು.

 ಸಚಿವೆ ಸ್ಮೃತಿ ಇರಾನಿ ಮಾತನಾಡಿ, ಗಾರ್ಮೆಂಟ್ಸ್ ನೌಕರರ ಕಲ್ಯಾಣಕ್ಕಾಗಿ ಕೇಂದ್ರಸರ್ಕಾರ 6 ಸಾವಿರ ಕೋಟಿ ರೂ. ಮೀಸಲಿಟ್ಟಿದೆ.  ಮಹಿಳಾ ನೌಕರರಿಗೆ ಕಿರುಕುಳ ತಪ್ಪಿಸುವ ನಿಟ್ಟಿನಲ್ಲಿ ಅಂತರಿಕ ದೂರು ಸಮಿತಿ ರಚಿಸುವಂತೆ ಎಲ್ಲಾ ಗಾರ್ಮೆಂಟ್ ಮಾಲೀಕರಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.

 ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದ ಅವರು, ಕಾಂಗ್ರೆಸ್ ನೇತೃತ್ವದಲ್ಲಿ ರಾಜ್ಯದಲ್ಲಿ ಭದ್ರತೆ ಇಲ್ಲದಂತಾಗಿದೆ ಎಂದು ಟೀಕಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?