ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಬೆಂಗಳೂರು: ರಸ್ತೆ ಅಪಘಾತದಲ್ಲಿ ಐವರು ಸಾವು, ಮೂವರಿಗೆ ಗಾಯ

ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ದೇವನಹಳ್ಳಿ-ವಿಜಯಪುರ ರಸ್ತೆಯಲ್ಲಿ ನಡೆದಿದೆ.

Nagaraja AB
Updated On : 13 Mar 2018, 5:25 am

ಬೆಂಗಳೂರು : ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ದೇವನಹಳ್ಳಿ-ವಿಜಯಪುರ ರಸ್ತೆಯಲ್ಲಿ ನಡೆದಿದೆ.

 ಪಾರ್ವತಮ್ಮ (68), ವಿಜಯ್ ಕುಮಾರ್ (42) ಹರೀಶ್ (38)  ಮತ್ತು ಸುಪ್ರೀತಾ ಮೃತಪಟ್ಟ ದುರ್ದೈವಿಗಳು. ಮೃತರೆಲ್ಲರೂ ದೊಡ್ಡಬಳ್ಳಾಪುರದ ಮಾರಹಳ್ಳಿ ಗ್ರಾಮಸ್ಥರು ಎಂದು ತಿಳಿದುಬಂದಿದೆ.

ಏಳು ಮಂದಿ ಸಂಬಂಧಿಕರ ಮನೆಗೆ ಔತಣಕೂಟಕ್ಕಾಗಿ ಹೋಗಿ ವಾಪಾಸ್ಸಾಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ . ಅತಿಯಾದ ವೇಗದಲ್ಲಿ ಕಾರು ಚಾಲನೆ ಮಾಡಿದುದ್ದೇ ಇದಕ್ಕೆ ಕಾರಣ  ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯಲ್ಲಿ ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗೆ ಸೇರಿಸಲಾಗಿದ್ದು ಚಿಕಿತ್ಸೆ ನೀಡಲಾಗಿದೆ . ಈ ಸಂಬಂಧ ವಿಜಯಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement