ಬೆಂಗಳೂರು: ಪ್ರತ್ಯೇತ ಲಿಂಗಾಯತ ಧರ್ಮ ವಿಚಾರಕ್ಕೆ ಸಂಬಂಧಿಸಿದಂತೆ ಬುಧವಾರ ನಡೆಯುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ರಾಣೆ ಬೆನ್ನೂರಿನಲ್ಲಿ ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರವಾಗಿ ನ್ಯಾಯಮೂರ್ತಿ ನಾಗಮೋಹನ ದಾಸ್ ಸಮಿತಿ ಸರ್ಕಾರಕ್ಕೆ ವರದಿ ಕೊಟ್ಟಿದ್ದು, ಬುಧವಾರ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ರ್ಚಚಿಸಿ ತೀರ್ಮಾನಿಸುತ್ತೇವೆ ಎಂದು ಹೇಳಿದರು.
ಇದೇ ವೇಳೆ ಪ್ರತ್ಯೇಕ ಧರ್ಮದ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಾಟಕ ಮಾಡುತ್ತಿದ್ದಾರೆ ಎಂದು ವಿಆರ್ಎಲ್ ಸಮೂಹ ಸಂಸ್ಥೆ ಮುಖ್ಯಸ್ಥರಾದ ಡಾ. ವಿಜಯ ಸಂಕೇಶ್ವರ ಅವರು ಆರೋಪಿಸಿರುವ ಕುರಿತು ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಸಂಕೇಶ್ವರ ಅವರ ಹೇಳಿಕೆ ಬೇಜವಾಬ್ದಾರಿತನದಿಂದ ಕೂಡಿದ್ದು, ಆಧಾರರಹಿತ, ರಾಜಕೀಯ ಪ್ರೇರಿತ ಹೇಳಿಕೆ ಎಂದು ಹೇಳಿದರು.
ವೀರಶೈವ ಮಹಾಸಭದ ನಿರ್ಧಾರದಲ್ಲಿ ಯಾವುದೇ ಬದಲಾವಣೆ ಇಲ್ಲ: ಶ್ಯಾಮನೂರು ಶಿವಶಂಕರಪ್ಪ
ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ವೀರಶೈವ ಮಹಾಸಭದ ಅಧ್ಯಕ್ಷ ಶ್ಯಾಮನೂರು ಶಿವಶಂಕರಪ್ಪ ಅವರು, ಪ್ರತ್ಯೇಕ ಲಿಂಗಾಯ ಧರ್ಮ ವಿಚಾರದಲ್ಲಿ ಮಹಾಸಭದ ನಿರ್ಧಾರದಲ್ಲಿ ಯಾವುದೇ ಬದಲಾವಣೆ ಇಲ್ಲ. ನಮ್ಮ ನಿರ್ಧಾರಕ್ಕೆ ನಾವು ಬದ್ಧರಾಗಿದ್ದೇವೆ. ಲಿಂಗಾಯತ-ವೀರಶೈವ ಬೇರೆ ಬೇರೆ ಅಲ್ಲ. ಪ್ರತ್ಯೇಕ ಧರ್ಮ ಮಾಡುವುದಿದ್ದರೆ ಲಿಂಗಾಯತ-ವೀರಶೈವ ಧರ್ಮ ಮಾಡಲಿ. ಅದನ್ನು ಬಿಟ್ಟು ಲಿಂಗಾಯತ ಬೇರೆ, ವೀರಶೈವ ಬೇರೆ ಮಾಡಲು ಸಾಧ್ಯವಿಲ್ಲ ಎಂದು ಹೇಳಿದರು.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos