ಬೆಂಗಳೂರು: ಮೊದಲ ಬಾರಿಗೆ ಒಂದೇ ದಿನ ಇಬ್ಬರಿಗೆ ಹೃದಯ ಕಸಿ ಯಶಸ್ವಿ 
ರಾಜ್ಯ

ಬೆಂಗಳೂರು: ಮೊದಲ ಬಾರಿಗೆ ಒಂದೇ ದಿನ ಇಬ್ಬರಿಗೆ ಹೃದಯ ಕಸಿ ಯಶಸ್ವಿ

ಇದೇ ಮೊದಲ ಬಾರಿಗೆ ಒಂದೇ ದಿನದಲ್ಲಿ ಗ್ರೀನ್ ಕಾರಿಡಾರ್ (ಸಿಗ್ನಲ್ ಮುಕ್ತ ರಹದಾರಿ) ನಿರ್ಮಾಣದ ಮೂಲಕ ಎರಡು ಹೃದಯಗಳನ್ನು ಪ್ರತ್ಯೇಕ ಆಸ್ಪತ್ರೆಗಳ ಮೂಲಕ ನಾರಾಯಣ ಹೃದಯಾಲಯಕ್ಕೆ ಸಾಗಿಸುವ ಮೂಲಕ ಇಬ್ಬರಿಗೆ ಜೀವದಾನ ನೀಡಿರುವ ಘಟನೆ ಮಂಗಳವಾರ ನಡೆದಿದೆ...

ಬೆಂಗಳೂರು: ಇದೇ ಮೊದಲ ಬಾರಿಗೆ ಒಂದೇ ದಿನದಲ್ಲಿ ಗ್ರೀನ್ ಕಾರಿಡಾರ್ (ಸಿಗ್ನಲ್ ಮುಕ್ತ ರಹದಾರಿ) ನಿರ್ಮಾಣದ ಮೂಲಕ ಎರಡು ಹೃದಯಗಳನ್ನು ಪ್ರತ್ಯೇಕ ಆಸ್ಪತ್ರೆಗಳ ಮೂಲಕ ನಾರಾಯಣ ಹೃದಯಾಲಯಕ್ಕೆ ಸಾಗಿಸುವ ಮೂಲಕ ಇಬ್ಬರಿಗೆ ಜೀವದಾನ ನೀಡಿರುವ ಘಟನೆ ಮಂಗಳವಾರ ನಡೆದಿದೆ. 
ಸಂಚಾರ ಪೊಲೀಸರ ಸಹಕಾರದಿಂದ ನಡೆಸಲಾದ ಈ ಸಾಹಸದಿಂದಾಗಿ ಬೊಮ್ಮಸಂದ್ರದಲ್ಲಿರುವ ನಾರಾಯಣ ಹೃದಯಾಲಯದಲ್ಲಿ ಹೃದ್ರೋಗದಿಂದ ಬಳಲುತ್ತಿದ್ದ ಬಾಲಕಿ ಎಚ್.ಜೆ.ಸಿರಿ (10) ಮತ್ತು ರಶ್ಮಿ ಪ್ರಸಾದ್ (40) ಎಂಬ ರೋಗಿಗಳಿಗೆ ನಿನ್ನೆ ಯಶಸ್ವಿಯಾಗಿ ಹೃದಯಗಳನ್ನು ಕಸಿ ಮಾಡುವಲ್ಲಿ ವೈದ್ಯರು ಯಶಸ್ವಿಯಾಗಿದ್ದಾರೆ. 
ನಗರದ ಕೆಂಗೇರಿಯ ಬಿಜಿಎಸ್ ಗ್ಲೋಬಲ್ ಆಸ್ಪತ್ರೆ ಮತ್ತು ಹೆಬ್ಬಾಳದ ಕೊಲಂಬಿಯಾ ಏಷ್ಯಾ ಆಸ್ಪತ್ರೆಯಲ್ಲಿ ಬದುಕಿನ ಕೊನೆಯ ಕ್ಷಣ ಎಣಿಸುತ್ತಿದ್ದ ದಾನಿಗಳ ಎರಡು ಜೀವಂತ ಹೃದಯಗಳನ್ನು ನೈಸ್ ರಸ್ತೆಯಲ್ಲಿ ಗ್ರೀನ್ ಕಾರಿಡಾರ್ ಮೂಲಕ ನಿನ್ನೆ ಬೆಳಿಗ್ಗೆ ನಾರಾಯಣ ಹೃದಯಾಲಯಕ್ಕೆ ರವಾನಿಸಲಾಯಿತು. 
ಜೀವಂತ ಹೃದಯ ರವಾನೆಗೆ ನಾರಾಯಣ ಹೃದಯಾಲಯದ ಎರಡು ಅತ್ಯಾಧುನಿಕ ವ್ಯವಸ್ಥೆಯ ವಿಶೇಷ ಆ್ಯಂಬುಲೆನ್ಸ್ ಗಳು ಮತ್ತು ತಜ್ಞ ವೈದ್ಯ ಸಿಬ್ಬಂದಿ ಬಳಕೆ ಮಾಡಲಾಗಿತ್ತು. ಅದಕ್ಕೂ ಮುನ್ನ ಸಂಚಾಕ ಪೊಲೀಸರು ನೈಸ್ ರಸ್ತೆಯಲ್ಲಿ ನಿರ್ವಿಘ್ನ ಸಂಚಾರ ಮಾರ್ಗಕ್ಕೆ ಅವಕಾಶ ಕಲ್ಪಿಸಿದ್ದರು. 
ಹೆಬ್ಬಾಳದ ಕೊಲಂಬಿಯಾ ಆಸ್ಪತ್ರೆಯಿಂದ ಒಯ್ಯಲಾದ ಹೃದಯ 29 ನಿಮಿಷಗಳಲ್ಲಿ ನಾರಾಯಣ ಹೃದಯಾಲಯವನ್ನು ತಲುಪಿದ್ದರೆ, ಬಿಜಿಎಸ್ ನಿಂದ ತೆಗೆದುಕೊಂಡು ಹೋಗಿದ್ದ ಹೃದಯ 26 ನಿಮಿಷಗಳಲ್ಲಿ ಆಸ್ಪತ್ರೆಗೆ ತಲುಪಿತ್ತು. 
ಮಾಗಡಿಯ 10 ವರ್ಷದ ಬಾಲಕ ಮಾ.9 ರಂದು ತನ್ನ ಚಿಕ್ಕಪ್ಪನೊಂದಿಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ನೆಲಮಂಗಲ ಸಮೀಪ ಅಪಘಾತಕ್ಕೀಡಾಗಿದ್ದ. ಇದರಿಂದ ಮಿದುಳು ನಿಷ್ಕ್ರಿಯಗೊಂಡಿದ್ದರಿಂದ ಸಾವಿನ ಅಂಚಿನಲ್ಲಿದ್ದ ಬಾಲಕನ ಹೃದಯವನ್ನು ಸಂಬಂಧಿಕರ ಆಕಾಂಕ್ಷೆಯಂತೆ ದಾನ ಮಾಡಲಾಗಿತ್ತು. ಇದು ಸಿರಿ ಎಂಬ ಬಾಲಕಿಗೆ ಜೀವದಾನ ನೀಡಿದೆ. 
ಕೊಲಂಬಿಯಾ ಏಷಿಯಾದಲ್ಲಿ ಈ ಹಿಂದೆ ಕೆಲಸ ಮಾಡಿದ್ದ ಮಾಜಿ ನರ್ಸ್ ಮಾ.10 ರಂದು ದ್ವಿಚಕ್ರ ವಾಹನದಲ್ಲಿ ದೇವಸ್ಥಾನಕ್ಕೆ ಹೊರಟಿದ್ದರು. ಚಿಕ್ಕಬಾಣಾವರ-ಹೆಸರುಘಟ್ಟ ಮುಖ್ಯ ರಸ್ತೆಯಲ್ಲಿದ್ದ ಹಂಪ್ ನಲ್ಲಿ ಅಪಘಾತಕ್ಕೀಡಾಗಿ ತೀವ್ರವಾಗಿ ಗಾಯಗೊಂಡಿದ್ದರು. ಘಟನೆಯಿಂದಾಗಿ ಆಕೆ ಬದುಕುವುದಿಲ್ಲ ಎಂಬ ವಿಷಯ ತಿಳಿದ ಆಕೆಯ ಪತಿ ಅಂಗಾಂಗ ದಾನಕ್ಕೆ ಮುಂದಾಗಿದ್ದರು. ಇದರಿಂದ ರಶ್ಮಿ ಎಂಬುವವರಿಗೆ ಮರು ಜೀವ ದೊರಕಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT