ರಾಜ್ಯ

ವಿದ್ವತ್ ಮೇಲೆ ಹಲ್ಲೆ ಪ್ರಕರಣ: ನಲಪಾಡ್ ಗೆ ಹೈ ಕೋರ್ಟ್ ಜಾಮೀನು ನಿರಾಕರಣೆ

Raghavendra Adiga
ಬೆಂಗಳೂರು: ವಿದ್ವತ್ ಮೇಲಿನ ಹಲ್ಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಮೊಹಮದ್ ನಲಪಾಡ್ ಗೆ ಜಾಮೀನು ನೀಡಲು ಹೈಕೋರ್ಟ್  ನಿರಾಕರಿಸಿದೆ. ಇದರಿಂದ ಶಾಸಕ ಹ್ಯಾರಿಸ್‌ ಪುತ್ರ ನಲಪಾಡ್‌ಗೆ ಜೈಲು ವಾಸವೇ ಖಾಯಂ ಆಗಿದೆ.
ನ್ಯಾಯಮೂರ್ತಿ ಶ್ರೀನಿವಾಸ್ ​ಕುಮಾರ್ ಅವರಿದ್ದ ಹೈಕೋರ್ಟ್ ಏಕಸದಸ್ಯ ಪೀಠ ಈ ತೀರ್ಪು ಪ್ರಕಟಿಸಿದೆ. ಸೋಮವಾರ ನಡೆದ ವಿಚಾರಣೆ ವೇಳೆ ನ್ಯಾಯಾಲಯವು ಜಾಮೀನು ತೀರ್ಪನ್ನು ಇಂದಿಗೆ (ಬುಧವಾರ) ಕಾಯ್ದಿರಿಸಿತ್ತು.
ವಿದ್ವತ್ ಮೇಲೆ ದಾಳಿ ನಡೆಸಿರುವುದು ವೀಡಿಯೋ ದೃಶ್ಯಗಳಿಂದ ಸಾಬೀತಾಗಿದೆ. ನಲಪಾಡ್ ಪ್ರಭಾವಿ ವ್ಯಕ್ತಿಯ ಮಗ. ಅವನು ಅದಾಗಲೇ ವಿದ್ವತ್ ನ ವೈದ್ಯಕೀಯ ದಾಖಲೆಗಳ ಪ್ರತಿ ಪಡೆದುಕೊಂಡಿರುವುದು ಅವನ ಪ್ರಭಾವೀ ವ್ಯಕ್ತಿತ್ವಕ್ಕೆ ಸಾಕ್ಷಿಯಾಗಿದೆ. ಹೀಗಾಗಿ ಪ್ರಕರಣದ ತನಿಖೆ ಪೂರ್ಣವಾಗುವವರೆಗೆ ಜಾಮೀನು ನೀಡುವುದಕ್ಕೆ ಆಗದು ಎಂದು ನ್ಯಾಯಮೂರ್ತಿಗಳು ಹೇಳಿದರು.
ಫೆ.16ರಂದು ವಿದ್ವತ್ ಮೇಲೆ ಹಲ್ಲೆ ನಡೆಸಿದ್ದ ನಲಪಾಡ್ ಹಾಗೂ ಸಹಚರರನ್ನು ಫೆ.21ರಂದು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿತ್ತು. ಕಳೆದ 22 ದಿನಗಳಿಂದ ಶಾಸಕರ ಪುತ್ರ ನಲಪಾಡ್ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.
SCROLL FOR NEXT