ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 14ಕ್ಕೂ ಹೆಚ್ಚು ಅತ್ಯಾಧುನಿಕ ಸರಕು ಪರಿಶೀಲನಾ ಯಂತ್ರ
ಪ್ರಯಾಣಿಕರ ಸರಕು ಪರಿಶೀಲನೆಗಾಗಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 14ಕ್ಕೂ ಹೆಚ್ಚು ಸ್ವಯಂ ಚಾಲಿತ ಪರಿಶೀಲನಾ ಯಂತ್ರಗಳನ್ನು ಅಳವಡಿಸಲಾಗುತ್ತಿದೆ.
ಬೆಂಗಳೂರು : ಪ್ರಯಾಣಿಕರ ಸರಕು ಪರಿಶೀಲನೆಗಾಗಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 14ಕ್ಕೂ ಹೆಚ್ಚು ಸ್ವಯಂ ಚಾಲಿತ ಪರಿಶೀಲನಾ ಯಂತ್ರಗಳನ್ನು ಅಳವಡಿಸಲಾಗುತ್ತಿದೆ.
ಈಗಾಗಲೇ ಇಂತಹ ಎರಡು ಯಂತ್ರಗಳು ಈ ವಿಮಾನ ನಿಲ್ದಾಣದಲ್ಲಿವೆ. ಇಂತಹ ವ್ಯವಸ್ಥೆ ಹೊಂದಿರುವ ದೇಶದ ಮೊದಲ ವಿಮಾನ ನಿಲ್ದಾಣ ಇದಾಗಿದೆ. 2017 ಮೇ ತಿಂಗಳಲ್ಲಿ ಇದನ್ನು ಪರಿಚಯಿಸಲಾಗಿದ್ದು, 350ರಿಂದ 40 ರೂ ಧರದ ಬ್ಯಾಗ್ ನ್ನು ಪ್ರತಿ ಗಂಟೆಯೂ ಪರಿಶೀಲನೆ ನಡೆಸಲಿದೆ.
ಈ ಬಗ್ಗೆ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ನೊಂದಿಗೆ ಮಾತನಾಡಿದ ದಿನನಿತ್ಯ ಕಾರ್ಯನಿರ್ವಹಣೆ ವಿಭಾಗದ ಜನರಲ್ ಮ್ಯಾನೇಜರ್ ಎಸ್. ವಿ. ಅರುಣಾಚಲಂ, ಮುಂದಿನ 18 ತಿಂಗಳೊಳಗೆ 14ಕ್ಕೂ ಹೆಚ್ಚು ಇಂತಹ ಯಂತ್ರಗಳನ್ನು ಅಳವಡಿಸಲಾಗುವುದು. ಇಂಗ್ಲೆಂಡ್ ನಿಂದ ಇಂತಹ ಯಂತ್ರೋಪಕರಣಗಳನ್ನು ಆಮದು ಮಾಡಿಕೊಳ್ಳಲಾಗುತ್ತಿದ್ದು, ಮಾನವರ ಹಸ್ತಕ್ಷೇಪ ಕಡಿಮೆಯಾಗಲಿದೆ ಎಂದು ತಿಳಿಸಿದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.