ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ ಶೆಟ್ಟಿ 
ರಾಜ್ಯ

ಚೂರಿ ಇರಿತಕ್ಕೊಳಗಾಗಿದ್ದ ಲೋಕಾಯುಕ್ತ ನ್ಯಾ.ವಿಶ್ವನಾಥ ಶೆಟ್ಟಿ ಆಸ್ಪತ್ರೆಯಿಂದ ಬಿಡುಗಡೆ

ದುಷ್ಕರ್ಮಿಯೊಬ್ಬನ ಚೂರಿ ಇರಿತಕ್ಕೆ ಒಳಗಾಗಿದ್ದ ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ ಶೆಟ್ಟಿಯವರು ಆಸ್ಪತ್ರೆಯಿಂದ ಬುಧವಾರ ಬಿಡುಗಡೆಗೊಂಡಿದ್ದಾರೆ...

ಬೆಂಗಳೂರು: ದುಷ್ಕರ್ಮಿಯೊಬ್ಬನ ಚೂರಿ ಇರಿತಕ್ಕೆ ಒಳಗಾಗಿದ್ದ ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ ಶೆಟ್ಟಿಯವರು ಆಸ್ಪತ್ರೆಯಿಂದ ಬುಧವಾರ ಬಿಡುಗಡೆಗೊಂಡಿದ್ದಾರೆ. 
ಚೂರಿ ಇರಿತಕ್ಕೆ ಒಳಗಾಗಿದ್ದ ವಿಶ್ವನಾಥ್ ಶೆಟ್ಟಿಯವರು ನಗರದ ಮಲ್ಯ ಆಸ್ಪತ್ರೆಯಲ್ಲಿ ಕಳೆದ ಒಂದು ವಾರದಿಂದ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ವಿಶ್ವನಾಥ್ ಶೆಟ್ಟಿಯವರು ಸಂಪೂರ್ಣವಾಗಿ ಗುಣಮುಖರಾಗಿರುವ ಹಿನ್ನಲೆಯಲ್ಲಿ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆಂದು ತಿಳಿದುಬಂದಿದೆ. 
ಆಸ್ಪತ್ರೆಯಿಂದ ಹೊರಬರುತ್ತಿದ್ದಂತೆಯೇ ವಿಶ್ವನಾಥ್ ಶೆಟ್ಟಿಯವರು ಆಸ್ಪತ್ರೆಯ ಸಿಬ್ಬಂದಿ ಹಾಗೂ ವೈದ್ಯರಿಗೆ ಧನ್ಯವಾದಗಳನ್ನು ಹೇಳಿದರು. 
ಮಲ್ಯ ಆಸ್ಪತ್ರೆಯ ವೈದ್ಯರು ಹಾಗೂ ಎಲ್ಲಾ ಸಿಬ್ಬಂದಿಗಳು ಉತ್ತಮವಾಗಿ ಚಿಕಿತ್ಸೆ ನೀಡಿದ್ದಾರೆ. ಜೊತೆಗೆ ರಾಜ್ಯ ಜನತೆಗೆ ಅಬಾರಿಯಾಗಿದ್ದೇನೆಂದು ತಿಳಿಸಿದ್ದಾರೆ. 
ಮಾ.7 ರಂದು ಲೋಕಾಯುಕ್ತ ಕಚೇರಿಗೆ ಪ್ರಕರಣ ದಾಖಲಿಸುವ ಸಲುವಾಗಿ ಬಂದ ತೇಜಸ್ ರಾಜ್ ಶರ್ಮಾ ಎಂಬ ವ್ಯಕ್ತಿ ವಿಶ್ವನಾಥ್ ಶೆಟ್ಟಿಯವರಿಗೆ ಚಾಕುವಿನಿಂದ ಇರಿದು ಹತ್ಯೆಗೆ ಯತ್ನಿಸಿದ್ದ. ಕೂಡಲೇ ಸಿಬ್ಬಂದಿಗಳು ವಿಶ್ವನಾಥ್ ಶೆಟ್ಟಿಯವರನ್ನು ಆಸ್ಪತ್ರೆಗೆ ದಾಖಲಿಸಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಜಮ್ಮು- ಕಾಶ್ಮೀರ: ಬುಡ್ಗಾಮ್‌ ಎನ್ ಕೌಂಟರ್ ನಲ್ಲಿ ಉಗ್ರನ ಹತ್ಯೆ; AK ರೈಫಲ್ ಮತ್ತಿತರ ಶಸ್ತ್ರಾಸ್ತ್ರಗಳು ವಶ!

10 ದಿನಗಳ ಬಳಿಕ ಸುರಂಗದಿಂದ ಕಾರ್ಮಿಕರ ಪವಾಡ ಸದೃಶ ರಕ್ಷಣೆ; ‘ಜಗತ್ತು ಈವರೆಗೆ ಕಂಡು ಕೇಳರಿಯದ ರಕ್ಷಣಾ ಕಾರ್ಯಾಚರಣೆ’; ತಜ್ಞ Arnold Dix

ಬೋನ್ ಇಟ್ಟಿದ್ದು ಹೆಣ್ಣಿಗೆ, ಸೆರೆಯಾಗಿದ್ದು 'ಗಂಡು': ಅರಣ್ಯ ಇಲಾಖೆಗೇ ಶಾಕ್, ಚಿರತೆ ಸೆರೆ ಕಾರ್ಯಾಚರಣೆಗೆ ಭಾರಿ ಟ್ವಿಸ್ಟ್!

ಉತ್ತರ ಪ್ರದೇಶ: CJP ಪ್ರತಿಭಟನಾಕಾರರ ತಂದೆಯ ಮೇಲೆ ಹಲ್ಲೆ; ಹಿಂದುತ್ವ influencer ಸ್ವತಂತ್ರ ಭಾರಧ್ವಾಜ್ ಬಂಧನ

ಸಚಿವರಿಗೆ ಸ್ವಾಗತ, ಹೂಮಳೆಯಲ್ಲಿ JDU ನಾಯಕ ತಲ್ಲೀನ; ಕುತ್ತಿಗೆಯಲ್ಲಿದ್ದ 7 ಲಕ್ಷ ರೂ ಮೌಲ್ಯದ ಚಿನ್ನದ ಸರ ಎಗರಿಸಿದ ಖತರ್ನಾಕ್ ಕಳ್ಳ! Video