ಸಾಂದರ್ಭಿಕ ಚಿತ್ರ 
ರಾಜ್ಯ

ಶೀಘ್ರವೇ ಬೆಂಗಳೂರು ರಸ್ತೆಗಿಳಿಯಲಿವೆ 40 ಎಲೆಕ್ಟ್ರಿಕ್ ಬಸ್ ಗಳು!

ನಗರದ ಪ್ರಮುಖ ರಸ್ತೆಗಳಲ್ಲಿ 40 ಬಸ್ ಗಳು ಶೀಘ್ರವೇ ಸಂಚರಿಸಲಿವೆ.ಹೈದರಾಬಾದ್ ಮೂಲದ ಗೋಲ್ಡ್ ಸ್ಟೋನ್ ಕಂಪನಿಯಿಂದ ಬಸ್ ಗಳನ್ನು ...

ಬೆಂಗಳೂರು: ನಗರದ ಪ್ರಮುಖ ರಸ್ತೆಗಳಲ್ಲಿ 40 ಬಸ್ ಗಳು ಶೀಘ್ರವೇ ಸಂಚರಿಸಲಿವೆ.ಹೈದರಾಬಾದ್ ಮೂಲದ ಗೋಲ್ಡ್ ಸ್ಟೋನ್ ಕಂಪನಿಯಿಂದ ಬಸ್ ಗಳನ್ನು ಲೀಸ್ ಗೆ ತೆಗೆದುಕೊಳ್ಳಲಾಗುತ್ತಿದೆ.  
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಐಟಿ ಕಾರಿಡಾರ್ ಮಾರ್ಗಗಳಲ್ಲಿ ಬಸ್ ಗಳು ಸಂಚರಿಸಲಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 150 ಎಲೆಕ್ಟ್ರಿಕ್‌ ಬಸ್‌ಗಳ ಪೈಕಿ ಸದ್ಯಕ್ಕೆ 40 ಬಸ್‌ಗಳನ್ನು ಗುತ್ತಿಗೆ ಆಧಾರದಲ್ಲಿ ಪಡೆಯಲು ಕೇಂದ್ರ ಸರಕಾರದಿಂದ ಅನುಮೋದನೆ ಸಿಕ್ಕಿದೆ. 
ಒಂದು ಎಲೆಕ್ಟ್ರಿಕ್‌ ಬಸ್‌ಗೆ 1 ರಿಂದ 2 ಕೋಟಿ ರೂ. ನೀಡಿ ಗುತ್ತಿಗೆ ಆಧಾರದಲ್ಲಿ ಪಡೆಯಲಾಗುತ್ತದೆ. ಇದರಲ್ಲಿ 85 ಲಕ್ಷ ರೂ.ನಿಂದ 1 ಕೋಟಿ ರೂ. ಸಹಾಯಧನವನ್ನು ಕೇಂದ್ರ ಸರಕಾರದಿಂದ ನಿರೀಕ್ಷಿಸಲಾಗಿತ್ತು. ಮೊದಲ ಹಂತದಲ್ಲಿ ಪಡೆಯುತ್ತಿರುವ 40 ಬಸ್‌ಗಳಿಗೆ ಕೇಂದ್ರದಿಂದ 40 ಕೋಟಿ ರೂ. ದೊರೆಯುವುದು ಖಚಿತವಾಗಿದೆ.
150 ಎಲೆಕ್ಟ್ರಿಕ್‌ ಬಸ್‌ಗಳು ಒಂದೇ ಬಾರಿಗೆ ರಸ್ತೆಗಿಳಿಯುವ ನಿರೀಕ್ಷೆಯಿತ್ತು. ಆದರೆ ಯೋಜನೆಯಲ್ಲಿರುವ ಅವಕಾಶದಂತೆ ಮೊದಲಿಗೆ 40 ಬಸ್‌ಗಳನ್ನು ಮಾತ್ರ ಪಡೆಯಲಾಗುತ್ತಿದೆ. ಫೆ.19 ಕ್ಕೆ ಟೆಂಡರ್‌ ಪ್ರಕ್ರಿಯೆ ಪೂರ್ಣಗೊಳ್ಳಲಿದ್ದು, ನಂತರ ಕೆಲವೇ ದಿನಗಳಲ್ಲಿ ಅರ್ಹ ಗುತ್ತಿಗೆದಾರರನ್ನು ಅಂತಿಮಗೊಳಿಸಲಾಗುತ್ತದೆ. 
ಎಲೆಕ್ಟ್ರಿಕ್‌ ಬಸ್‌ಗಳನ್ನು ಬಿಎಂಟಿಸಿ ಚಾಲಕರು ಚಾಲನೆ ಮಾಡುವಂತಿಲ್ಲ. ಗುತ್ತಿಗೆ ಪಡೆಯುವ ಸಂಸ್ಥೆಯು ತರಬೇತಿ ನೀಡಿದ ತಮ್ಮದೇ ಚಾಲಕರನ್ನು ಇದಕ್ಕೆ ನೇಮಿಸಲಿದೆ. ಇದರ ಜತೆಗೆ ಬಿಎಂಟಿಸಿ ಡಿಪೊದಲ್ಲಿ ಚಾರ್ಜಿಂಗ್‌ ವ್ಯವಸ್ಥೆಯನ್ನೂ ಮಾಡಿಕೊಳ್ಳಬೇಕು. ಪ್ರತಿ ಕಿ.ಮೀ. ದರ ಹಾಗೂ ಚಾರ್ಜಿಂಗ್‌ ಮಾಡಿಕೊಳ್ಳಲು ವಿದ್ಯುತ್‌ ವೆಚ್ಚವನ್ನು ಬಿಎಂಟಿಸಿ ಭರಿಸಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್