ಬೆಂಗಳೂರಿನಲ್ಲಿ ಮಳೆ (ಸಂಗ್ರಹ ಚಿತ್ರ) 
ರಾಜ್ಯ

ಕೇರಳದಲ್ಲಿ ಚಂಡಮಾರುತ ಪರಿಣಾಮ; ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಭಾರಿ ಮಳೆ

ಕೇರಳದಲ್ಲಿ ಬೀಸುತ್ತಿರುವ ಭಾರಿ ಚಂಡಮಾರುತದ ಪರಿಣಾಮದಿಂದಾಗಿ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಶುಕ್ರವಾರ ಮಳೆಯಾಗಿದೆ.

ಬೆಂಗಳೂರು: ಕೇರಳದಲ್ಲಿ ಬೀಸುತ್ತಿರುವ ಭಾರಿ ಚಂಡಮಾರುತದ ಪರಿಣಾಮದಿಂದಾಗಿ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಶುಕ್ರವಾರ ಮಳೆಯಾಗಿದೆ.
ವಾಯುಭಾರ ಕುಸಿತದಿಂದ ಉಂಟಾಗುವ ಚಂಡಮಾರುತವು ಪ್ರಸ್ತುತ ಗಂಟೆಗೆ 20 ಕಿಲೋಮೀಟರ್‌ ವೇಗದಲ್ಲಿ ಅರಬ್ಬಿ ಸಮುದ್ರದತ್ತ ಚಲಿಸುತ್ತಿದೆ. ತಿರುವನಂತಪುರದಿಂದ 390 ಕಿಲೋ ಮೀಟರ್‌ ನೈಋುತ್ಯದಲ್ಲಿ ಕಾಸರಗೋಡು ತನಕ ಸಮುದ್ರದಲ್ಲಿ ಬಲಗೊಳ್ಳುವ ಸಾಧ್ಯತೆ ಇದ್ದು, ಇದರ ಫಲವಾಗಿ ತಿರುವನಂತಪುರ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಂಭವವಿದೆ. ನಿನ್ನೆ ಸಂಜೆ ವೇಳೆ ಬೆಂಗಳೂರಿನಲ್ಲಿ ಸುರಿದಿದ್ದ ಭಾರಿ ಮಳೆ ಇಂದು ಸಂಜೆಯೂ ಮುಂದುವರೆದಿದ್ದು, ಬೆಂಗಳೂರಿನಲ್ಲಿ ಸಂಜೆ ವೇಳೆಗೆ ಹಲವು ಭಾಗಗಳಲ್ಲಿ ಮಳೆಯಾಗಿದೆ. ಇದರಿಂದ ಸಂಜೆ ವೇಳೆ ಕಚೇರಿಯಿಂದ ಮನೆಗೆ ತೆರಳುವವರು ಸಾಕಷ್ಟು ಪರದಾಡಬೇಕಾಯಿತು.
ತುಂತುತು ಮಳೆಯಿಂದಾಗಿ ಸಾರಿಗೆ ಸಂಚಾರದಲ್ಲಿ ಭಾರಿ ವ್ಯತ್ಯಯ ಉಂಟಾಗಿತ್ತು. ಎಂ.ಜಿ. ರಸ್ತೆ. ಶಿವಾನಂದ ಸರ್ಕಲ್‌, ಬಸವನಗುಡಿ, ಚಾಮರಾಜಪೇಟೆ, ಮಲ್ಲೇಶ್ವರ ಸೇರಿದಂತೆ ಹಲವಾರು ಭಾಗಗಳಲ್ಲಿ ಮಳೆಯಾಗಿದ್ದು, ಬೈಕ್ ಸವಾರರು ಪರದಾಡುವಂತಾಗಿತ್ತು. ನಗರದ ಹಲವೆಡೆ ತೀವ್ರ ಟ್ರಾಫಿಕ್ ಜಾಮ್ ಉಂಟಾಗಿ ಸಂಚಾರ ಅಸ್ತವ್ಯಸ್ಥವಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?

ನವೆಂಬರ್‌ನಲ್ಲಿ ಕರ್ನಾಟಕ ಬಿಜೆಪಿಗೆ ಮೇಜರ್ ಸರ್ಜರಿ: ಬಿವೈ ವಿಜಯೇಂದ್ರ, ಆರ್ ಅಶೋಕಗೆ ಗೇಟ್ ಪಾಸ್?; ಹೊಸ ಮುಖಗಳಿಗೆ ಮಣೆ!

ಬಾಕಿ ಸಾಲ ವಸೂಲಿಗೆ 'ಗೃಹಲಕ್ಷ್ಮಿ' ಯೋಜನೆಯ ಹಣ ಕಡಿತಗೊಳಿಸದಂತೆ ಬ್ಯಾಂಕುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಸರ್ಕಾರ!

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನಿರಾಳ; ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸುವ ನಿರ್ಧಾರ ರದ್ದು!