ಬೆಂಗಳೂರು: ಉಚ್ಛಾಟಿತ ಎಐಎಡಿಎಂಕೆ ಮುಖ್ಯಸ್ಥೆ ಶಶಿಕಲಾ ಅವರ ಪತಿ ಎಂ ನಟರಾಜನ್ ಅವರು ಮತ್ತೆ ಅನಾರೋಗ್ಯಕ್ಕೆ ತುತ್ತಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದುಬಂದಿದೆ.
ಮೂಲಗಳ ಪ್ರಕಾರ ಮಾರ್ಚ್ 16ರಂದು ನಟರಾಜನ್ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಉಸಿರಾಟದ ತೊಂದರೆಯಿಂದ ಬಳಲುತ್ತಿರುವ ನಟರಾಜನ್ ಅವರಿಗೆ ವೆಂಟಿಲೇಟರ್ ಮೂಲಕ ಕೃತಕ ಉಸಿರಾಟದ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಈ ಬಗ್ಗೆ ನಟರಾಜನ್ ಅವರು ದಾಖಲಾಗಿರುವ ಗ್ಲೆನಿಗಲ್ಸ್ ಗ್ಲೋಬಲ್ ಆಸ್ಪತ್ರೆ ವೈದ್ಯರು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ.
ನಟರಾಜನ್ ಅವರ ಆರೋಗ್ಯ ಸ್ಥಿರವಾಗಿದ್ದು, ಉಸಿರಾಟದ ತೊಂದರೆಯಿಂದಾಗಿ ಅವರಿಗೆ ವೆಂಟಿಲೇಟರ್ ವ್ಯವಸ್ಥೆ ಅಳವಡಿಸಲಾಗಿದೆ ಎಂದು ಹೇಳಿದ್ದಾರೆ.
ಕಳೆದ ನವೆಂಬರ್ ನಲ್ಲಿ ತೆರಿಗೆ ವಂಚನೆ ಪ್ರಕರಣ ಸಂಬಂಧ ನಟರಾಜನ್ ಅವರಿಗೆ ಮದ್ರಾಸ್ ಹೈಕೋರ್ಟ್ 2 ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು. ಇದರ ಬೆನ್ನಲ್ಲೇ ನಟರಾಜನ್ ಅವರು ಅನಾರೋಗ್ಯಕ್ಕೀಡಾಗಿ ಆಸ್ಪತ್ರೆಗೆ ದಾಖಲಾಗಿದ್ದರು. 74 ವರ್ಷದ ನಟರಾಜನವ್ ಅವರಿಗೆ ಚೆನ್ನೈ ಖಾಸಗಿ ಆಸ್ಪತ್ರೆಯಲ್ಲಿ ಕಿಡ್ನಿ ಮತ್ತು ಲಿವರ್ ಟ್ರಾನ್ಸ್ ಪ್ಲಾಂಟೇಷನ್ ಶಸ್ತ್ರ ಚಿಕಿತ್ಸೆ ಮಾಡಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics