ತುಮಕೂರು, ಬೆಳಗಾವಿ ಸೇರಿ ರಾಜ್ಯದ ವಿವಿಧೆಡೆ ಎಸಿಬಿ ದಾಳಿ 
ರಾಜ್ಯ

ತುಮಕೂರು, ಬೆಳಗಾವಿ ಸೇರಿ ರಾಜ್ಯದ ವಿವಿಧೆಡೆ ಎಸಿಬಿ ದಾಳಿ: ಕಡತಗಳ ಪರಿಶೀಲನೆ

ತುಮಕೂರು, ಚಿತ್ರದುರ್ಗ, ಧಾರವಾಡ ಸೇರಿದಂತೆ ರಾಜ್ಯದ ನಾನಾ ಕಡೆ ಬೆಳ್ಳಂಬೆಳಿಗ್ಗೆ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಬೆಂಗಳೂರು: ತುಮಕೂರು, ಚಿತ್ರದುರ್ಗ, ಧಾರವಾಡ ಸೇರಿದಂತೆ ರಾಜ್ಯದ ನಾನಾ ಕಡೆ ಬೆಳ್ಳಂಬೆಳಿಗ್ಗೆ  ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. 
ತುಮಕೂರಿನ ಉಪವಿಭಾಗಾಧಿಕಾರಿ ತಿಪ್ಪೇಸ್ವಾಮಿ ಮನೆ, ಕಛೇರಿಗಳ ಮೇಲೆ ಎಸಿಬಿ ದಾಳಿ ನಡೆಸಿದೆ. ಇದೇ ವೇಳೆ  ಎಸಿ ತಿಪ್ಪೇಸ್ವಾಮಿಯವರ ಚಿತ್ರದುರ್ಗದ ನಿವಾಸದ ಮೇಲೆ ಸಹ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ದಾಳಿ ಮಾಡಿದ್ದು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.
ಬೆಳಗಾವಿಯಲ್ಲಿ ಎಇಇ ಕಿರಣ್ ಸುಬ್ಬರಾವ್ ಭಟ್ ಮನೆ, ಕಾರಾಂಜಾ ನೀರಾವರಿ ಯೋಜನೆಯ ಎಇಇ ವಿಜಯ್​ಕುಮಾರ್​ ಅವರ ಕಲಬುರಗಿ ಜಿಲ್ಲೆಯ ಭಗವತಿ ನಗರದಲ್ಲಿರುವ ಮನೆ,ಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿ ಕಡತಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.
ಧಾರವಾಡದಲ್ಲಿ ಶ್ರೀಪತಿ ದೊಡ್ಡಲುಂಗಣ್ಣನವರ್,ದಾವಣಗೆರೆಯಲ್ಲಿ ದೂಡಾ ಜಂಟಿ ನಿರ್ದೇಶಕ ಮನೆ, ಕಚೇರಿ, ಮಹಾನಗರ ಪಾಲಿಕೆ, ನಿರ್ದೇಶಕ ಗೋಪಾಲಕೃಷ್ಣ ಅವರ ಮೇಲೆ ಸಹ ಎಸಿಬಿ ಅಧಿಕಾರಿಗಳು ದಾಳಿನಡೆಸಿದ್ದಾರೆ. ಎನ್ನುವ ಮಾಹಿತಿ ಇದೆ.
ಎಸಿಬಿ ಡಿವೈಎಸ್​ಪಿ ವೀರೇಶ್,  ಎಸಿಬಿ ಡಿವೈಎಸ್​​ಪಿ ವಾಸು ದೇವರಾಮ, ಸಿಎಸ್​ ಪಿ.ಜೆ.ರಘು ನೇತೃತ್ವದಲ್ಲಿ ದಾಳಿ ನಡೆದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಾಳೆ CJPಯ ತಿರಂಗಾ ಮೆರವಣಿಗೆ ನಡೆಯಬೇಕಿದ್ದ ದೆಹಲಿಯ ಸೆಂಟ್ರಲ್ ಪಾರ್ಕ್ ಅನ್ನು 2 ದಿನ ಮುಚ್ಚಿದ NDMC!

ಕನ್ನಡಿಗರು ಕೊಟ್ಟ ದುಡ್ಡಲ್ಲೇ AR Rahman ತಮ್ಮ ಮೊದಲ ಸ್ಟುಡಿಯೋ ಕಟ್ಟಿದ್ದು: ನಟ ಯಶ್

ದೇಶಕ್ಕೆ ಹೇಗೆ ಬೆಂಕಿ ಹಚ್ಚಬೇಕು ಎಂಬುದನ್ನು ಬಾಂಗ್ಲಾದೇಶ ನಮಗೆ ತೋರಿಸಿಕೊಟ್ಟಿದೆ: ನೇಹಾ ಬೋರಾ ಹೇಳಿಕೆಗೆ ಬಿಜೆಪಿ ಆಕ್ರೋಶ!

Ramayana: 'ರಾಮಾಯಣ'ದ ರನ್ ಟೈಮ್ ಮೂರು ಗಂಟೆಗೂ ಹೆಚ್ಚು; ಅಮೆರಿಕದಲ್ಲಿ 'PG-13' ರೇಟಿಂಗ್!

ದೆಹಲಿಯ ರಾಮಲೀಲಾದಲ್ಲಿ ಈ ಬಾರಿ ರಾವಣನ ಜೊತೆಗೆ 30 ಅಡಿ ಎತ್ತರದ ಕಾಕ್ರೋಚ್ ಪ್ರತಿಕೃತಿ ದಹನ!