ಚಿಕ್ಕಮಗಳೂರು: ಜನಾಶೀರ್ವಾದ ಯಾತ್ರೆಯ ಮೂರನೇ ಹಂತದಲ್ಲಿ ಚಿಕ್ಕಮಗಳೂರು ಜಿಲ್ಲಾ ಪ್ರವಾಸದಲ್ಲಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಇಂದು ಶೃಂಗೇರಿಯ ಶಾರಾದಾ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದರು..
ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ. ಸಿ, ವೇಣುಗೋಪಾಲ್, ಮುಖ್ಯಮಂತ್ರಿ ಸಿದ್ದರಾಮಯ್ಯ ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್ ಮತ್ತಿತರರು ರಾಹುಲ್ ಗಾಂಧಿಗೆ ಸಾಥ್ ನೀಡಿದರು.
ನಂತರ ರಾಹುಲ್ ಗಾಂಧಿ, ಶೃಂಗೇರಿ ಮಠದ ಜಗದ್ಗುರುಗಳಾದ ಶ್ರೀ ಶ್ರೀ ಶ್ರೀ ಭಾರತಿ ತೀರ್ಥ ಮಹಾಸ್ವಾಮೀಜಿಗಳವರನ್ನು ಭೇಟಿ ಮಾಡಿ, ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಶೃಂಗೇರಿ ಮಠದಲ್ಲಿನ ಮಕ್ಕಳೊಂದಿಗೆ ರಾಹುಲ್ ಗಾಂಧಿ ಚರ್ಚೆ ನಡೆಸಿದರು.
ಬಳಿಕ ಮಾತನಾಡಿದ ಅವರು "ನಾನು ಇಂದು ಶೃಂಗೇರಿ ಮಠದಲ್ಲಿ ಮಕ್ಕಳನ್ನು ಭೇಟಿ ಮಾಡಿ ಧರ್ಮದ ಅರ್ಥದ ಕುರಿತು ಪ್ರಶ್ನಿಸಿದಾಗ, ಆ ಸಣ್ಣ ಮಕ್ಕಳು ಧರ್ಮವೆಂದರೆ, "ಸತ್ಯ ಮೇವ ಜಯತೆ" ಎಂದರು. ಧರ್ಮದ ನಿಜವಾದ ಅರ್ಥ ಸಣ್ಣ ಮಕ್ಕಳು ಅರ್ಥ ಮಾಡಿಕೊಂಡಿದ್ದಾರೆ. ಆದರೆ ನರೇಂದ್ರಮೋದಿ ಮಾತ್ರ ಹೋದಲ್ಲೆಲ್ಲಾ ಸುಳ್ಳು ಹೇಳುತ್ತಾ ತಿರುಗುತ್ತಾರೆ" ಎಂದು ಆರೋಪಿಸಿದರು.