ಸಚಿವ ಡಿ.ಕೆ ಶಿವಕುಮಾರ್ (ಸಂಗ್ರಹ ಚಿತ್ರ) 
ರಾಜ್ಯ

ತೆರಿಗೆ ವಂಚನೆ, ಸಾಕ್ಷ್ಯ ನಾಶ ಆರೋಪ: ಸಚಿವ ಡಿಕೆಶಿ ನ್ಯಾಯಾಲಯಕ್ಕೆ ಹಾಜರು

ಐಟಿ ಇಲಾಖೆ ದಾಳಿ ವೇಳೆ ದಾಖಲೆ ನಾಶ ಪಡಿಸಲು ಕೆಲ ಪತ್ರಗಳನ್ನು ಹರಿದು ಹಾಕಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಇಂಧನ ಸಚಿವ ಡಿ.ಕೆ. ಶಿವಕುಮಾರ್​ ...

ಬೆಂಗಳೂರು:  ಐಟಿ ಇಲಾಖೆ ದಾಳಿ ವೇಳೆ ದಾಖಲೆ ನಾಶ ಪಡಿಸಲು ಕೆಲ ಪತ್ರಗಳನ್ನು ಹರಿದು ಹಾಕಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಇಂಧನ ಸಚಿವ ಡಿ.ಕೆ. ಶಿವಕುಮಾರ್​ ಗುರುವಾರ ಆರ್ಥಿಕ ಅಪರಾಧ ಪ್ರಕರಣಗಳ ನ್ಯಾಯಾಲಯಕ್ಕೆ ಹಾಜರಾಗಿದ್ದರು.
ಐಟಿಯ ಇಲಾಖೆ ವರದಿ ಆಧರಿಸಿ ಪ್ರಕರಣ ದಾಖಲಿಸಿಕೊಂಡಿದ್ದ ಆರ್ಥಿಕ ಅಪರಾಧ ಪ್ರಕರಣಗಳ ನ್ಯಾಯಾಲಯ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿತ್ತು.
ಸಚಿವ ಡಿ.ಕೆ ಶಿವಕುಮಾರ್  ವಿರುದ್ಧ ಆದಾಯ ತೆರಿಗೆ ವಂಚನೆ, ರೆಸಾರ್ಟ್‌ ಮೇಲೆ ದಾಳಿ ನಡೆಸಿದ ವೇಳೆ ಕೆಲವು ಮಹತ್ವದ ಚೀಟಿ ಹರಿದು ಹಾಕಿರುವುದು, ಅಕ್ರಮವಾಗಿ ಸಾಲ ನೀಡಿ ತೆರಿಗೆ ವಂಚನೆ ಮಾಡಿರುವ ಆರೋಪಗಳಿದ್ದು, ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯದಲ್ಲಿ ಒಟ್ಟು ಮೂರು ಕ್ರಿಮಿನಲ್‌ ಕೇಸ್‌ಗಳು ದಾಖಲಾಗಿವೆ.
ಈಗಲ್‌ಟನ್‌ ರೆಸಾರ್ಟ್‌ ಮೇಲೆ ಐಟಿ ದಾಳಿ ನಡೆದಾಗ ಅಧಿಕಾರಿಗಳ ಎದುರೇ ಹಣಕಾಸು ವ್ಯವಹಾರದ ಚೀಟಿ ಹರಿದು ಹಾಕಿರುವುದನ್ನು ಅವರು ವಿಚಾರಣೆ ವೇಳೆ ಒಪ್ಪಿಕೊಂಡಿದ್ದರು. ಪ್ರಕರಣದ ವಿಚಾರಣೆ ಆರಂಭವಾಗುವ ಅರ್ಧ ಗಂಟೆಯ ಮುಂಚೆಯೇ ಡಿಕೆಶಿ ಕೋರ್ಟ್​ಗೆ ತಲುಪಿದ್ದು, ಅವರ ಜತೆ ಡಿಕೆಶಿ ಸಹೋದರರಾದ ಸಂಸದ ಡಿ.ಕೆ.ಸುರೇಶ್ ಇದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!