ಬೆಂಗಳೂರು: ನಗರದ ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್ ಮೇಲಿನಿಂದ ಬಿದ್ದು ಬೈಕ್ ಸವಾರ ಸಾವನ್ನಪ್ಪಿದ್ದಾರೆ.
ಮೇಲ್ಸೇತುವೆಗೆ ಬೈಕ್ ಡಿಕ್ಕಿ ಹೊಡೆದ ರಭಸಕ್ಕೆ ಸವಾರ ಸೇತುವೆಯಿಂದ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಮೃತನನ್ನು ಆಂಧ್ರ ಮೂಲದ ಶರತ್ ಕುಮಾರ್ ಎಂದು ಗುರುತಿಸಲಾಗಿದೆ.
ಶರತ್ ಕುಮಾರ್ ಎಲೆಕ್ಟ್ರಾನಿಕ್ ಸಿಟಿಯ ಸಾಫ್ಟ್ ವೇರ್ ಕಂಪನಿಯೊಂದರಲ್ಲಿ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. ಕೆಲಸ ಮುಗಿಸಿಕೊಂಡು ಬಜಾಬ್ ಅವೆಂಜರ್ ಬೈಕ್ ನಲ್ಲಿ ಹೋಗುತ್ತಿದ್ದಾಗ ಮೇಲ್ಸೆತುವೆ ಮೇಲಿನ ವಿಶ್ರಾಂತಿ ಸ್ಥಳದ ಸಮೀಪದ ತಡೆಗೋಡೆಗೆ ಬೈಕ್ ಡಿಕ್ಕಿ ಹೊಡೆದಿದೆ.
ಶರತ್ ಕುಮಾರ್ 20 ಅಡಿಗಿಂತಲೂ ಎತ್ತರದಿಂದ ಕೆಳಗೆ ಬಿದ್ದ ಪರಿಣಾಮ ಆತನ ತಲೆಗೆ ಗಂಭೀರ ಗಾಯವಾಗಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ಸಂಬಂಧ ಹುಳಿಮಾವು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.