ರಾಜ್ಯ

ಲಿಂಗಾಯತ-ವೀರಶೈವ ಧರ್ಮಕ್ಕೆ ಅಲ್ಪಸಂಖ್ಯಾತ ಸ್ಥಾನಮಾನ: ರಾಜ್ಯ ಸರ್ಕಾರದಿಂದ ಅಧಿಸೂಚನೆ

Lingaraj Badiger
ಬೆಂಗಳೂರು: ರಾಜ್ಯದಲ್ಲಿ ಲಿಂಗಾಯತ ಮತ್ತು ಬಸವತತ್ವ ನಂಬುವ ವೀರಶೈವ ಲಿಂಗಾಯತರಿಗೆ ಧಾರ್ಮಿಕ ಅಲ್ಪಸಂಖ್ಯಾತ ಸ್ಥಾನಮಾನ ನೀಡಿ ರಾಜ್ಯ ಸರ್ಕಾರ ಶುಕ್ರವಾರ ಅಧಿಸೂಚನೆ ಹೊರಡಿಸಿದೆ.
ಕಳೆದ ಸೋಮವಾರ ಲಿಂಗಾಯತ ಹಾಗೂ ವೀರಶೈವ ಲಿಂಗಾಯತರಿಗೆ (ಬಸವ ತತ್ವವನ್ನು ನಂಬುವ) ಅಲ್ಪಸಂಖ್ಯಾತ ಧರ್ಮದ ಮಾನ್ಯತೆ ನೀಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು  ಸಚಿವ ಸಂಪುಟ ಒಪ್ಪಿಗೆ ಸೂಚಿಸಿತ್ತು. 
ಇದರ ಬೆನ್ನಲ್ಲೇ ಕರ್ನಾಟಕ ರಾಜ್ಯ ಅಲ್ಪ ಸಂಖ್ಯಾತರ ಆಯೋಗದ 1994ರ ಪ್ರಕರಣ 10ರ ಅನ್ವಯ ರಾಷ್ಟ್ರೀಯ ಅಲ್ಪ ಸಂಖ್ಯಾತ ಆಯೋಗದ ಅಧಿನಿಯಮ 1992ರ 2(ಸಿ) ಅಡಿಯಲ್ಲಿ ಲಿಂಗಾಯತ-ವೀರಶೈವ ಧರ್ಮಕ್ಕೆ ಅಲ್ಪಸಂಖ್ಯಾತ ಮಾನ್ಯತೆ ನೀಡಿ ಅಧಿಸೂಚನೆ ಹೊರಡಿಸಿದೆ.
ಲಿಂಗಾಯತರಿಗೆ ಪ್ರತ್ಯೇಕ ಧರ್ಮದ ಸ್ಥಾನಮಾನ ನೀಡುವ ಕುರಿತು ನ್ಯಾಯಮೂರ್ತಿ ಎಚ್.ಎನ್. ನಾಗಮೋಹನದಾಸ್‌ ನೇತೃತ್ವದ ತಜ್ಞರ ಸಮಿತಿ ನೀಡಿದ ವರದಿಯನ್ನು ಸರ್ಕಾರ ಅಂಗೀಕರಿಸಿತ್ತು. ಸಮಿತಿ ವರದಿ ಆಧರಿಸಿ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗ ನೀಡಿದ ಶಿಫಾರಸುಗಳನ್ನು ಸರ್ಕಾರ ಒಪ್ಪಿಕೊಂಡಿದೆ.
SCROLL FOR NEXT