ಎಮ್ಎಂ ಕಲಬುರ್ಗಿ 
ರಾಜ್ಯ

ಕಲಬುರ್ಗಿ ಹತ್ಯೆ ಪ್ರಕರಣ ಸಂಬಂಧ ಅಫಿಡವಿಟ್ ಸಲ್ಲಿಸಿ: ಮೂರು ರಾಜ್ಯಗಳಿಗೆ ಸುಪ್ರೀಂ ಸೂಚನೆ

ಖ್ಯಾತ ಸಾಹಿತಿ ಎಂಎಂ ಕಲಬುರ್ಗಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಕರ್ನಾಟಕ, ಗೋವಾ, ಮಹಾರಾಷ್ಟ್ರ ಸರ್ಕಾರಗಳು ನಾಲ್ಕು ವಾರಗಳಲ್ಲಿ ಅಫಿಡವಿಟ್ ಸಲ್ಲಿಸಬೇಕು ಎಂದು ಸುಪ್ರೀಂ ಕೋರ್ಟ್ ಆದೇಶಿಸಿದೆ/

ನವದೆಹಲಿ: ಖ್ಯಾತ ಸಾಹಿತಿ ಎಂಎಂ ಕಲಬುರ್ಗಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಕರ್ನಾಟಕ, ಗೋವಾ, ಮಹಾರಾಷ್ಟ್ರ ಸರ್ಕಾರಗಳು ನಾಲ್ಕು ವಾರಗಳಲ್ಲಿ ಅಫಿಡವಿಟ್ ಸಲ್ಲಿಸಬೇಕು ಎಂದು ಸುಪ್ರೀಂ ಕೋರ್ಟ್ ಆದೇಶಿಸಿದೆ/
ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಮತ್ತು ನ್ಯಾಯಮೂರ್ತಿ ಎ ಎಂ ಖಾನ್ವಿಲ್ಕರ್ ಮತ್ತು ಡಿ ವೈ ಚಂದ್ರಚೂದ್ ಅವರ ನೇತೃತ್ವದ ತ್ರಿಸದಸ್ಯ ಪೀಠವು ಕಲಬುರ್ಗಿ ಅವರ ಪತ್ನಿ ಉಮಾ ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿ ಈ ಆದೇಶ ನಿಡಿದೆ.
"ಕಲಬುರ್ಗಿ ಹತ್ಯೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಏಜೆನ್ಸಿ (ಎನ್ಐಎ) ಯಿಂದ ತನಿಖೆ ಮಾಡಲು ಸಾಧ್ಯವಿಲ್ಲ. ಏಕೆಂದರೆ ಅದು ಎನ್ಐಎ ಕಾಯಿದೆಯ ವ್ಯಾಪ್ತಿಗೆ ಬರುವುದಿಲ್ಲ." ಎಂದು ಕೇಂದ್ರ ಸರ್ಕಾರದ ಪ್ರತಿನಿಧಿ ಹಿರಿಯ ಕಾನೂನು ಅಧಿಕಾರಿ ಹೆಚ್ಚುವರಿ ಸಾಲಿಸಿಟರ್ ಜನರಲ್ (ಎಎಸ್ಜಿ) ಪಿಂಕಿ ಆನಂದ್,ನ್ಯಾಯಪೀಠಕ್ಕೆ ತಿಳಿಸಿದ್ದಾರೆ.
ಸಾಹಿತಿ ಕಲಬುರ್ಗಿ ಅವರ ಪತ್ನಿ ಉಮಾ ಕಲಬುರ್ಗಿಯವರು ಹತ್ಯೆಗೆ ಸಂಬಂಧಿಸಿ ವಿಶೇಷ ತನಿಖಾ ದಳ (ಎಸ್ ಐ ಟಿ) ತನಿಖೆಯಾಗಬೇಕೆಂದು ಕೋರಿ ಸರ್ವೋಚ್ಚ ನ್ಯಾಯಾಲಯದ ಮೊರೆ ಹೋಗಿದ್ದರು. 2015ರಲ್ಲಿ ಧಾರವಾಡದಲ್ಲಿ ತನ್ನ ಪತಿ ಎಂಎಂ ಕಲಬುರ್ಗಿ ಅವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆಂದು ಅವರು ಅರ್ಜಿಯಲ್ಲಿ ಸೂಚಿಸಿದ್ದಾರೆ.
ಕಳೆದ ಬಾರಿಯ ವಿಚಾರಣೆ ಸಮಯದಲ್ಲಿ ಸಹ ಉಮಾ ಕಲಬುರ್ಗಿ ಅವರು ಪನ್ಸಾರೆ ಹಾಗೂ ದಾಬೋಳ್ಕರ್ ಹತ್ಯೆ ಮಾದರಿಯಲ್ಲಿಯೇ ತನ್ನ ಪತಿ ಕೊಲೆಯಾಗಿದ್ದಾರೆ. ಈ ಮೂರೂ ಪ್ರಕರಣಗಳನ್ನು ಒಟ್ಟಾಗಿ ಸುಸಂಘಟಿತ ತನಿಖೆ ನಡೆಸಬೇಕು ಎಂದು ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!