ಮೈಸೂರು: ಪ್ರೀತಿಸುತ್ತಿದ್ದ ಯುವತಿಯೊಂದಿಗೆ ವಿವಾಹವಾಗುವಂತೆ ಒತ್ತಡ ಹೇರಿದ್ದಕ್ಕೆ ತೀವ್ರವಾಗಿ ಮನನೊಂದ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗುರುವಾರ ರಾತ್ರಿ ನಡೆದಿದೆ.
ಕ್ಯಾತಮಾರನಹಳ್ಳಿ ನಿವಾಸಿಯಾಗಿದ್ದ ದೀಪಕ್ (23) ಆತ್ಮಹತ್ಯೆಗೆ ಶರಣಾದ ಯುವಕನಾಗಿದ್ದಾನೆ. ಕಳೆದ ಎರಡು ವರ್ಷಗಳಿಂದ ದೀಪಕ್ ಹಾಗೂ ಯುವತಿ ಪರಸ್ಪರ ಪ್ರೀತಿಸುತ್ತಿದ್ದರು. ಈ ವಿಚಾರವನ್ನು ಯುವತಿ ಮನೆಯವರಿಗೆ ತಿಳಿಸಿದ್ದಳು.
ಇದರಂತೆ ಯುವತಿಯ ಮನೆಯವರು ಯುಗಾದಿ ಹಬ್ಬದ ದಿನದಂದು ದೀಪಕ್ ನನ್ನು ಮನೆಗೆ ಕರೆದಿದ್ದಾರೆ. ಈ ವೇಳೆ ಮದುವೆ ವಿಚಾರವನ್ನು ಪ್ರಸ್ತಾಪ ಮಾಡಿದ್ದಾರೆ. ಈ ವೇಳೆ ಈಗಲೇ ಮದುವೆ ಬೇಡ ಎಂದು ಹೇಳಿದ್ದಾರೆ. ಈ ವೇಳೆ ತೀವ್ರವಾಗಿ ಕೆಂಡಾಮಂಡಲಗೊಂಡ ಯುವತಿಯ ಪೋಷಕರು ಯುವಕನನ್ನು ಪೊಲೀಸ್ ಠಆಣೆಗೆ ಕರೆದೊಯ್ದಿದ್ದಾರೆ. ಬಳಿಕ ಯುವಕರನ ತಾಯಿಯನ್ನು ಪೊಲೀಸ್ ಠಾಣೆಗೆ ಕರೆಸಿದ ಪೊಲೀಸರು ಮಾತುಕತೆ ನಡೆಸಿದ್ದಾರೆ. ಈ ವೇಳೆ ಯುವಕನ ತಾಯಿ ಮಂಗಳ ಮದುವೆಗೆ ಒಪ್ಪಿ, ವಿವಾಹದ ದಿನಾಂಕವನ್ನು ನಿಶ್ಚಯಿಸುವುದಾಗಿ ತಿಳಿಸಿದ್ದಾರೆ.
ಇದಾದ ಬಳಿಕ ಯುವತಿಯ ಪೋಷಕರು ಶೀಘ್ರಗತಿಯಲ್ಲಿ ವಿವಾಹ ದಿನಾಂಕವನ್ನು ನಿಶ್ಚಯ ಮಾಡುವಂತೆ ಒತ್ತಡ ಹೇರಿದ್ದಾರೆ. ಇದರಿಂದ ನೊಂದು ದೀಪಕ್ ಆತ್ಮಹತ್ಯೆಗೆ ಶರಣಾಗಿದ್ದಾನೆಂದು ತಾಯಿ ಮಂಗಳಾ ಅವರು ಆರೋಪಿಸಿದ್ದಾರೆ.
ದೀಪಕ್ ಹಲವು ವರ್ಷಗಳ ಹಿಂದೆಯೇ ತನ್ನ ತಂದೆಯನ್ನು ಕಳೆದುಕೊಂಡಿದ್ದು, ಹಿರಿಯ ಸಹೋದರನೊಬ್ಬ ಇದ್ದಾನೆ. ದೀಪಕ್ ಆತ್ಮಹತ್ಯೆಗೆ ಶರಣಾಗುವ ಹಿಂದಿನ ದಿನ ತಾಯಿ ಮಂಗಳ ಅವರು ತಮ್ಮ ಹಿರಿಯ ಪುತ್ರನೊಂದಿಗೆ ಕೆಲಸ ಮೇರೆಗೆ ಬೆಂಗಳೂರು ನಗರಕ್ಕೆ ಬಂದಿದ್ದಾರೆ. ಮರುದಿನ ಮನೆಗೆ ಹೋದಾಗ ದೀಪಕ್ ನೇಣಿಗೆ ಶರಣಾಗಿರುವುದು ಕಂಡು ಬಂದಿದೆ.
ಪುತ್ರನ ಸಾವಿನ ಹಿನ್ನಲೆಯಲ್ಲಿ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಮಂಗಳಾ ಅವರು ನನ್ನ ಪುತ್ರನ ಸಾವಿಗೆ ಕಾರಣರಾದ ಯಾರನ್ನೂ ಸುಮ್ಮನೆ ಬಿಡುವುದಿಲ್ಲ ಎಂದು ಹೇಳಿದ್ದಾರೆ.
ಪ್ರಕರಣ ಸಂಬಂಧ ಪ್ರತಿಕ್ರಿಯೆ ನೀಡಿರುವ ಉದಯ್ ಗಿರಿ ಠಾಣಾ ಪೊಲೀಸರು, ಯುವತಿಯ ಪೋಷಕರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ. ಪ್ರಕರಣ ಸಂಬಂಧ ಈ ವರೆಗೂ ಯಾರನ್ನು ಬಂಧನಕ್ಕೊಳಪಡಿಸಲಾಗಿಲ್ಲ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos