ಚಾಮರಾಜನಗರ : ಗಡಿ ಜಿಲ್ಲೆ ಚಾಮರಾಜನಗರದ ಕೊಳ್ಳೇಗಾಲದಲ್ಲಿ ನೂತನವಾಗಿ ನಿರ್ಮಿಸಿರುವ ಇಂದಿರಾ ಕ್ಯಾಂಟೀನ್ ನ್ನು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಇಂದು ಉದ್ಘಾಟಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ, ಸಂಸದ ಧ್ರುವನಾರಾಯಣ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ನಂತರ ಕೊಳ್ಳೇಗಾಲದಲ್ಲಿ ರಾಹುಲ್ ಗಾಂಧಿ ರೋಡ್ ಶೋ ನಡೆಸಿದರು. ಇದಕ್ಕೂ ಮುನ್ನ ರಾಹುಲ್ ಗಾಂಧಿ , ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ತೆರಳಿ ನಾಡ ದೇವತೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು.
ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ , ಬಿಜೆಪಿಯ ಹಲವು ರಾಷ್ಟ್ರೀಯ ಮಟ್ಟದ ನಾಯಕರು ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ. ಆಡಳಿತಾರೂಢ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲು ಪ್ರಯತ್ನಿಸುತ್ತಿದ್ದರೆ, ಬಿಜೆಪಿ ದಕ್ಷಿಣ ಭಾರತದಲ್ಲಿ ಅಧಿಕಾರ ಪಡೆಯಲು ಕಣ್ಣಿಟ್ಟಿದೆ.