ಬೆಂಗಳೂರು: ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್'ಎಸ್ಎಸ್)ದ ಕಾರ್ಯಕರ್ತ ರುದ್ರೇಶ್ ಕೊಲೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ತಂಡ (ಎನ್ಐಎ)ಕ್ಕೆವಹಿಸಿರುವ ಕ್ರಮವನ್ನು ಎತ್ತಿಹಿಡಿದಿರುವ ಹೈಕೋರ್ಟ್ ವಿಭಾಗೀಯ ಪೀಠ, ಈ ಹಿಂದೆ ಎನ್ಐಎ ತನಿಖೆ ರದ್ದುಪಡಿಸಿದ್ದ ಏಕಸದಸ್ಯ ಪೀಠದ ಆದೇಶವನ್ನು ವಜಾಗೊಳಿಸಿದೆ.
ಎನ್ಐಎ ತನಿಖೆ ರದ್ದುಪಡಿಸಿದ್ದ ಹೈಕೋರ್ಟ್ ಏಕ ಸದಸ್ಯ ಪೀಠದ ಆದೇಶ ಪ್ರಶ್ನಿಸಿ ಕೇಂದ್ರ ಗೃಹ ಸಚಿವಾಲಯ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ವಿಭಾಗೀಯ ಪೀಠವು ಏಕ ಸದಸ್ಯ ಪೀಠದ ಆದೇಶವನ್ನು ರದ್ದು ಪಡಿಸಿದೆ.
ಕ್ರಿಮಿನಲ್ ಪ್ರಕಱಣದ ಯಾವ ತನಿಖಾ ಸಂಸ್ಥೆಯಿಂದ ತನಿಖೆ ನಡೆಯಬೇಕು ಎಂದು ಹೇಳುವ ಹಕ್ಕು ಆರೋಪಿಗೆ ಇರುವುದಿಲ್ಲ. ಈ ವಿಚಾರ ಸರ್ಕಾರದ ವಿವೇಚನೆಗೆ ಬಿಟ್ಟದ್ದಾಗಿದೆ. ಅಲ್ಲದೆ, ಈ ಘಟನೆ ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ವಿಚಾರವಾಗಿದೆ ಎಂದು ವಿಭಾಗೀಯ ಪೀಠ ಹೇಳಿದೆ.