ಲಿಂಗಾಯತ ಸಮಾವೇಶ ರ್ಯಾಲಿ 
ರಾಜ್ಯ

ಲಿಂಗಾಯತರು ಮೀಸಲಾತಿ ಕೋಟಾ ಕಳೆದುಕೊಳ್ಳುವುದಿಲ್ಲ:ಎಸ್ಎಂ ಜಾಮದಾರ್

ಲಿಂಗಾಯತರಿಗೆ ಪ್ರತ್ಯೇಕ ಅತ್ಪಸಂಖ್ಯಾತ ಧರ್ಮದ ಸ್ಥಾನಮಾನ ನೀಡಿದರೆ ಶಿಕ್ಷಣ ಮತ್ತು ಉದ್ಯೋಗ ಕ್ಷೇತ್ರಗಳಲ್ಲಿ ಈಗಿರುವ ಕೋಟಾ ಸೌಲಭ್ಯಕ್ಕೆ ಯಾವುದೇ ....

ಬೆಂಗಳೂರು: ಲಿಂಗಾಯತರಿಗೆ ಪ್ರತ್ಯೇಕ ಅತ್ಪಸಂಖ್ಯಾತ ಧರ್ಮದ ಸ್ಥಾನಮಾನ ನೀಡಿದರೆ ಶಿಕ್ಷಣ ಮತ್ತು ಉದ್ಯೋಗ ಕ್ಷೇತ್ರಗಳಲ್ಲಿ ಈಗಿರುವ ಕೋಟಾ ಸೌಲಭ್ಯಕ್ಕೆ ಯಾವುದೇ ತೊಂದರೆಯಾಗುವುದಿಲ್ಲ ಎಂದು ಜಾಗತಿಕ ಲಿಂಗಾಯತ ಮಹಾಸಭಾದ ಪ್ರಧಾನ ಕಾರ್ಯದರ್ಶಿ ಎಸ್ಎಂ ಜಾಮದಾರ್ ತಿಳಿಸಿದ್ದಾರೆ.

ವೀರಶೈವ ಮತ್ತು ಲಿಂಗಾಯತ ಸಮುದಾಯಗಳನ್ನು ಪ್ರತ್ಯೇಕಿಸಿದರೆ ಸಮುದಾಯದ ಹಲವು ಉಪ ಜಾತಿಗಳು ಎಸ್ ಸಿ/ಎಸ್ ಟಿ ಮತ್ತು ಒಬಿಸಿ ಕೋಟಾದಡಿ ಮೀಸಲಾತಿ ಕಳೆದುಕೊಳ್ಳಬಹುದು ಎಂಬ ಗ್ರಹಿಕೆ ಹಲವರಿಗಿದೆ. ಇಲ್ಲಿಯವರೆಗೆ ಈ ಜಾತಿಯವರು ಹಿಂದೂ ಧರ್ಮದ ಭಾಗವೆಂದು ಪರಿಗಣಿಸಲಾಗುತ್ತಿತ್ತು. ಆದರೆ ಈಗ ಸಮುದಾಯಗಳನ್ನು ಪ್ರತ್ಯೇಕಿಸಿದರೆ ಮೀಸಲಾತಿ ಸೌಲಭ್ಯಗಳಿಗೆ ಯಾವುದೇ ತೊಂದರೆಯುಂಟಾಗುವುದಿಲ್ಲ ಎಂದು ಹೇಳಿದರು.

ನಮ್ಮ ದೇಶದಲ್ಲಿ ಸಿಖ್ ರು, ಬೌದ್ಧರು ಮೀಸಲಾತಿ ಸೌಲಭ್ಯ ಪಡೆಯುವಂತೆ ಲಿಂಗಾಯತರು ಸಹ ಅಲ್ಪಸಂಖ್ಯಾತ ಸ್ಥಾನಮಾನ ಸಿಕ್ಕಿದ ನಂತರ ಶಿಕ್ಷಣ ಮತ್ತು ಉದ್ಯೋಗ ಕ್ಷೇತ್ರಗಳಲ್ಲಿ ಮೀಸಲಾತಿ ಸೌಲಭ್ಯಗಳನ್ನು ಪಡೆಯುತ್ತಾರೆ. ಒಂದು ವೇಳೆ ಮೀಸಲಾತಿ ಸೌಲಭ್ಯವನ್ನು ಸರ್ಕಾರ ನಿರಾಕರಿಸಿದರೆ ಕಾನೂನು ಹೋರಾಟವನ್ನು ಮಹಾಸಭಾ ನಡೆಸಲಿದೆ ಎಂದು ಜಾಮದಾರ್ ಸುದ್ದಿಗಾರರಿಗೆ ತಿಳಿಸಿದರು.

ಇತ್ತೀಚೆಗೆ ವಿಜಯಪುರದಲ್ಲಿ ನಡೆದ ಸಮ್ಮೇಳನದಲ್ಲಿ ಹಲವು ವೀರಶೈವ ಮುಖಂಡರು ಮತ್ತು ಸ್ವಾಮೀಜಿಗಳು ಮಾಡಿದ ಪ್ರಚೋದನಾಕಾರಿ ಭಾಷಣಗಳಿಗೆ ಜಾಮದಾರ್ ಆಕ್ಷೇಪ ವ್ಯಕ್ತಪಡಿಸಿದರು. ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ ಮುನ್ನ ಗಲಭೆ. ಹಿಂಸಾಚಾರಗಳು ನಡೆಯುವ ಸಾಧ್ಯತೆಯಿರುವುದರಿಂದ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕೆಂದು ಹೇಳಿದರು. ಲಿಂಗಾಯತರ ವಿರುದ್ಧ ವೀರಶೈವರನ್ನು ಎತ್ತಿ ಕಟ್ಟಲಾಗುತ್ತಿದೆ ಎಂದು ಪರೋಕ್ಷವಾಗಿ ಅವರು ಬಿಜೆಪಿಯನ್ನು ಆರೋಪಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

IPL 2026: ಬರೊಬ್ಬರಿ 40 ಮಿಲಿಯನ್ ಫಾಲೋವರ್ಸ್ ಇದ್ದ Insta ಖಾತೆ ಡಿಲೀಟ್ ಮಾಡಿದ Hardik Pandya

SCROLL FOR NEXT