ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ
ಚಿತ್ರದುರ್ಗ: ಲಿಂಗಾಯಕ ಪ್ರತ್ಯೇಕ ಧರ್ಮ ಕುರಿತು ಶೀಘ್ರದಲ್ಲಿಯೇ ಸೂಕ್ತ ರೀತಿಯ ನಿರ್ಧಾರಗಳನ್ನು ಕೈಗೊಳ್ಳಲಾಗುತ್ತದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಮಂಗಳವಾರ ಹೇಳಿದ್ದಾರೆ.
ಅಮಿತ್ ಶಾ ಅವರ ಮಠಗಳ ಭೇಟಿ ಎರಡನೇ ಕೂಡ ಮುಂದುವರೆದಿದ್ದು, ನಿನ್ನೆಯಷ್ಟೇ ತರಲಬಲು ಮಠ, ಮದರ ಚೆನ್ನಯ್ಯ ಮಠ ಮತ್ತು ಮುರುಗಾ ಮಠಕ್ಕೆ ಭೇಟಿ ನೀಡಿದ್ದರು.
ಶೃಂಗೇರಿಗೆ ಆಗಮಿಸಿದ ಅಮಿತ್ ಶಾ ಅವರು ಮಧ್ಯಾಹ್ನ ಊಟವನ್ನು ಶಿವಮೂರ್ತಿ ಶಿವಾಚಾರ್ಯ ಸ್ವಾಮಿಗಳೊಂದಿಗೆ ಮಾಡಿದರು. ಬಳಿಕ ಬಸವಮೂರ್ತಿ ಮದರ ಚೆನ್ನಯ್ಯ ಸ್ವಾಮಿ ಮಠಕ್ಕೆ ಬೇಟಿ ನೀಡಿದ ಅವರು, ಮದರ ಚೆನ್ನಯ್ಯ ಮತ್ತು ಅಲ್ಲಮ ಪ್ರಭುಗೆ ಪುಷ್ಪ ನಮನ ಸಲ್ಲಿಸಿದರು.
ನಂತರ ಮುರುಗ ಮಠಕ್ಕೆ ಭೇಟಿ ನೀಡಿ ಡಾ.ಶಿವಮೂರ್ತಿ ಮುರುಗ ಶರಣ ಅವರೊಂದಿಗೆ ವಿವಿಧ ವಿಚಾರಗಳ ಕುರಿತು ಮಾತುಕತೆಗಳನ್ನು ನಡೆಸಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರ ಕುರಿತಂತೆ ಶೀಘ್ರದಲ್ಲಿಯೇ ಸೂಕ್ತ ರೀತಿಯ ನಿರ್ಧಾರಗಳನ್ನು ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ. ಅಲ್ಲದೆ, ಕೆಲ ಕಡೆ ಸ್ವಾಮೀಜಿಗಳು ಚುನಾವಣೆಗೆ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದು, ಈ ಬಗ್ಗೆ ಪಕ್ಷವೂ ಸಕಾರಾತ್ಮಕವಾಗಿ ಸ್ಪಂದಿಸಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.