ನೂತನ ಮೇಯರ್ ಕಚೇರಿ ಉದ್ಘಾಟಿಸಿದ ಪೌರ ಕಾರ್ಮಿಕರು 
ರಾಜ್ಯ

ಪೌರ ಕಾರ್ಮಿಕರಿಂದ ಕಲಬುರಗಿಯಲ್ಲಿ ನೂತನ ಮೇಯರ್ ಕಚೇರಿ ಉದ್ಘಾಟನೆ

ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಮೇಯರ್ ಕಚೇರಿಯನ್ನು ಪೌರ ಕಾರ್ಮಿಕರು ನಿನ್ನೆ ಉದ್ಘಾಟಿಸಿದರು.

ಕಲಬುರಗಿ : ರಾಜ್ಯ ವಿಧಾನಸಭಾ ಚುನಾವಣೆಯ ನೀತಿ ಸಂಹಿತೆ ಒಂದು ತಾಸು ಮುಂಚಿತವಾಗಿ ಜಾರಿಯಾದ ಹಿನ್ನೆಲೆಯಲ್ಲಿ ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಮೇಯರ್ ಕಚೇರಿಯನ್ನು ಪೌರ ಕಾರ್ಮಿಕರು ನಿನ್ನೆ ಉದ್ಘಾಟಿಸಿದರು.

 ನಗರದಲ್ಲಿನ ಒಳಚರಂಡಿ ಸ್ವಚ್ಛಗೊಳಿಸುವ ಪೌರ ಕಾರ್ಮಿಕರು ಸಮಾಜದ ಕೀಲಿಕೈ ಆಗಿದ್ದು, ಮಹಾನಗರ ಪಾಲಿಕೆಯ ಬೆನ್ನೆಲುಬು ಆಗಿದ್ದಾರೆ ಎಂದು ಮೇಯರ್ ಶರಣಕುಮಾರ್ ಮೋದಿ ಹೇಳಿದರು.

ಮಹಾನಗರ ಪಾಲಿಕೆಯ ಕಟ್ಟಡ ನಿರ್ಮಾಣ ಕಾಮಗಾರಿ ಶೇ.99 ರಷ್ಟು ಪೂರ್ಣಗೊಂಡಿದ್ದು, ತನ್ನ ಕಚೇರಿಯನ್ನು ಪೌರ ಕಾರ್ಮಿಕರ ಉದ್ಘಾಟಿಸಬೇಕೆಂದು ಮನವಿ ಮಾಡಿದ್ದಾಗಿ ಅವರು ತಿಳಿಸಿದರು.

ಅಪೂರ್ಣಗೊಂಡಿರುವ ನೂತನ ಕಟ್ಟಡವನ್ನು ಉದ್ಘಾಟಿಸುವುದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶರಣಪ್ರಕಾಶ್ ಪಾಟೀಲ್ ಕೆಲ ದಿನಗಳ ಹಿಂದಷ್ಟೇ ಹೇಳಿಕೆ ನೀಡಿದ್ದರು.

50 ವರ್ಷಗಳಷ್ಟು ಹಳೆಯದಾದ ಕಟ್ಟಡದ ನಿರ್ಮಾಣ ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ. ಇದನ್ನು ಗಮನದಲ್ಲಿಟ್ಟುಕೊಂಡು ನೂತನ ಕಚೇರಿಯನ್ನು ಉದ್ಘಾಟಿಸಿರುವುದಾಗಿ ಮೇಯರ್  ತಿಳಿಸಿದರು.


Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್