ರಾಜ್ಯ

ಲಿಂಗಾಯತ, ವೀರಶೈವಕ್ಕೆ ಧಾರ್ಮಿಕ ಅಲ್ಪಸಂಖ್ಯಾತ ಸ್ಥಾನ ನೀಡುವಂತೆ ಕೇಂದ್ರಕ್ಕೆ ಸರ್ಕಾರ ಪತ್ರ

Manjula VN
ಬೆಂಗಳೂರು: ಲಿಂಗಾಯತ ಹಾಗೂ ವೀರಶೈವ ಸಮುದಾಯಗಳಿಗೆ ಅಲ್ಪಸಂಖ್ಯಾತ ಸ್ಥಾನ ನೀಡಿರುವ ರಾಜ್ಯ ಸರ್ಕಾರ ಇದೀಗ, ಎರಡೂ ಸಮುದಾಯಗಳಿಗೂ ಧಾರ್ಮಿಕ ಅಲ್ಪಸಂಖ್ಯಾತ ಸ್ಥಾನಮಾನ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದೆ ಎಂದು ಗುರುವಾರ ತಿಳಿದುಬಂದಿದೆ. 
ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯಕ್ಕೆ ಪತ್ರ ಬರೆದಿರುವ ಸರ್ಕಾರ, ಬಸವ ತತ್ತ್ವಗಳನ್ನು ನಂಬಿ ನಡೆಯುತ್ತಿರುವ ಲಿಂಗಾಯರು ಹಾಗೂ ವೀರಶೈವ ಸಮುದಾಯಗಳನ್ನು ಧಾರ್ಮಿಕ ಅಲ್ಪಸಂಖ್ಯಾತರೆಂದು ಪರಿಗಣಿಸುವಂತೆ ಪತ್ರದಲ್ಲಿ ತಿಳಿಸಿದೆ ಎಂದು ವರದಿಗಳು ತಿಳಿಸಿವೆ. 
1992ರ ರಾಷ್ಟ್ರೀಯ ಅಲ್ಪಸಂಖ್ಯಾತ ಕಾಯ್ದೆಯನ್ವಯ ಸೆಕ್ಷನ್2(ಸಿ) ಅಡಿಯಲ್ಲಿ ಲಿಂಗಾಯತರು ಹಾಗೂ ವೀರಶೈವ ಸಮುದಾಯಗಳನ್ನು ಧಾರ್ಮಿಕ ಅಲ್ಪಸಂಖ್ಯಾತರೆಂದು ಪರಿಗಣಿಸುವಂತೆ ಪತ್ರದಲ್ಲಿ ಸರ್ಕಾರ ತಿಳಿಸಿದೆ. 
ಲಿಂಗಾಯತರು ಹಾಗೂ ವೀರಶೈವ ಸಮುದಾಯಗಳಿಗೆ ಪ್ರತ್ಯೇಕ ಧರ್ಮದ ಸ್ಥಾನ ನೀಡುವಂತೆ ನಾಗಮೋಹನ್ ದಾಸ್ ಸಮಿತಿ ನೀಡಿದ್ದ ಸಲಹೆಯನ್ನು ಪರಿಗಣಿಸಿದ್ದ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಕೆಲ ದಿನಗಳ ಹಿಂದಷ್ಟೇ ಲಿಂಗಾಯತರು ಹಾಗೂ ವೀರಶೈವರಿಗೆ ಅಲ್ಪಸಂಖ್ಯಾತ ಸ್ಥಾನಮಾನವನ್ನು ನೀಡಿತ್ತು. ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದ ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಅವರು, ರಾಜ್ಯ ಸರ್ಕಾರ ಸಮುದಾಯಗಳನ್ನು ಒಡೆಯುತ್ತಿದೆ ಎಂದು ಆರೋಪ ಮಾಡಿದ್ದರು. 
SCROLL FOR NEXT