ಕೆ. ರತ್ನಪ್ರಭಾ 
ರಾಜ್ಯ

ಮುಖ್ಯ ಕಾರ್ಯದರ್ಶಿ ರತ್ನಪ್ರಭಾ ಸೇವಾವಧಿ 3 ತಿಂಗಳು ವಿಸ್ತರಣೆ

: ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಕೆ.ರತ್ನಪ್ರಭಾ ಸೇವಾವಧಿಯನ್ನು ಮೂರು ತಿಂಗಳ ಕಾಲ ಅಂದರೆ ಜೂನ್ 30 2018ರ ವರೆಗೆ ವಿಸ್ತರಣೆ ಮಾಡಲಾಗಿದೆ. ...

ಬೆಂಗಳೂರು: ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಕೆ.ರತ್ನಪ್ರಭಾ ಸೇವಾವಧಿಯನ್ನು ಮೂರು ತಿಂಗಳ ಕಾಲ  ಅಂದರೆ ಜೂನ್ 30 2018ರ ವರೆಗೆ ವಿಸ್ತರಣೆ ಮಾಡಲಾಗಿದೆ. 
1981ರ ತಂಡದ ಐಎಎಸ್‌ ಅಧಿಕಾರಿಯಾದ ರತ್ನಪ್ರಭಾ ಅವರು ಈ ತಿಂಗಳ 31 ರಂದು ಶನಿವಾರ ನಿವೃತ್ತಿಯಾಗಬೇಕಿತ್ತು. ಸೇವಾವಧಿಯನ್ನು ಮುಂದಿನ ಮೂರು ತಿಂಗಳು ವಿಸ್ತರಣೆ ಮಾಡುವಂತೆ ಸಿಎಂ ಸಿದ್ದರಾಮಯ್ಯ ಅವರು ಕಳೆದ ಫೆಬ್ರವರಿ 20 ರಂದು ಕೇಂದ್ರ ಸರಕಾರಕ್ಕೆ ಶಿಫಾರಸು ಮಾಡಿದ್ದರು
ಈ ಶಿಫಾರಸಿಗೆ ಕೇಂದ್ರ ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಅನುಮೋದನೆ ನೀಡಿ ಗುರುವಾರ ರಾಜ್ಯದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಗೆ ಮಾಹಿತಿ ರವಾನಿಸಿದೆ. 
ಏಪ್ರಿಲ್‌ 1 ರಿಂದ ಜೂನ್‌ 30 ರವರೆಗೆ ರತ್ನಪ್ರಭಾ ಸೇವಾವಧಿ ವಿಸ್ತರಣೆ ಮಾಡಲಾಗಿದ್ದು, ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮುಖ್ಯ ಕಾರ್ಯದರ್ಶಿ ಬದಲಾವಣೆ ಮಾಡಲು ಬಯಸದ ರಾಜ್ಯ ಸರ್ಕಾರ ಸೇವಾವಧಿ ವಿಸ್ತರಣೆ ಮಾಡಲು ನಿರ್ಧರಿಸಿ ಕೇಂದ್ರಕ್ಕೆ ಶಿಫಾರಸು ಮಾಡಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ