ಕಾರವಾರ: ವಿವಾದಾತ್ಮಕ ಹೇಳಿಕೆಗಳಿಂದಲೇ ಸುದ್ದಿಗೆ ಗ್ರಾಸವಾಗುತ್ತಿರುವ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗ್ಡೆ ತಾನೇನೂ ಮುಸ್ಲಿಂ ವಿರೋಧಿಯಲ್ಲ ಎಂದು ಹೇಳಿದ್ದಾರೆ.
ಇಂದು ಉಡುಪಿ ಜಿಲ್ಲೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿ ನೀಡುತ್ತಿರುವ ಹಿನ್ನಲೆಯಲ್ಲಿ ಕಾರವಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅನಂತ್ ಕುಮಾರ್ ಹೆಗ್ಡೆ ಅವರು, 'ನಾನು ಮುಸ್ಲಿಂ ವಿರೋಧಿ ಅಲ್ಲ. ಆದರೆ ಇನ್ನೊಂದು ಸಮಾಜವನ್ನು ತುಳಿದು ಬದುಕಬೇಕು ಎನ್ನುವುದನ್ನು ನಾನು ಒಪ್ಪುವುದಿಲ್ಲ' ಎಂದು ಹೇಳಿದ್ದಾರೆ.
ಇದೇ ವೇಳೆ ಕಾಂಗ್ರೆಸ್ ವಿರುದ್ಧ ಟೀಕಾ ಪ್ರಹಾರ ನಡೆಸಿದ ಅವರು, 'ಹಿಂದುಳಿದ ರೋಗ ಕೊಟ್ಟಿದ್ದೇ ಕಾಂಗ್ರೆಸ್. ಮೀಸಲಾತಿ ಹೆಸರಿನಲ್ಲಿ ಹಿಂದುಳಿದವರನ್ನು ಒಡೆದು ಆಳುವ ಕೆಲಸ ಕಾಂಗ್ರೆಸ್ ಮಾಡಿದೆ. ಜನರಿಗೆ ಆತ್ಮವಿಶ್ವಾಸ ತುಂಬುವ ಬದಲು ಉಚಿತ ಯೋಜನೆಗಳನ್ನು ಕೊಟ್ಟಿದೆ. ಕಾಂಗ್ರೆಸ್ ಇರುವವರೆಗೆ ದೇಶ ಉದ್ಧಾರ ಆಗುವುದಿಲ್ಲ. ಆದ್ದರಿಂದ ಈ ಬಾರಿ ಕಾಂಗ್ರೆಸ್ ಪಕ್ಷವನ್ನು ಎಂದೂ ತಲೆ ಎತ್ತದಂತೆ ಸೋಲಿಸಿ' ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics