ಪ್ರಧಾನಮಂತ್ರಿ ನರೇಂದ್ರ ಮೋದಿ
ಬೆಂಗಳೂರು; 36 ವರ್ಷಗಳ ಬಳಿಕ ಕರ್ನಾಟಕ ರಾಜ್ಯದ ಗದಗ ಜಿಲ್ಲೆಗೆ ಮೊದಲ ಬಾರಿಗೆ ಪ್ರಧಾನಮಂತ್ರಿಗಳು ಭೇಟಿ ನೀಡುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಪ್ರಧಾನಮಂತ್ರಿಗಳನ್ನು ಸ್ವಾಗತಿಸಲು ಗದಗ ಜನತೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ.
1985ರಲ್ಲಿ ಇಂದಿರಾ ಗಾಂಧಿಯವರು ಭೇಟಿ ನೀಡಿದ್ದರು. ಇದಾದ 36 ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಮಂತ್ರಿಗಳು ಗದಗ ಜಿಲ್ಲೆಗೆ ಭೇಟಿ ನೀಡುತ್ತಿದ್ದು, ಜನತೆ ಮುಖದಲ್ಲಿ ಮಂದಹಾಸ ಮೂಡಿದೆ.
ಮೇ.5 ರಂದು ಗದಗ ಜಿಲ್ಲೆಗೆ ಭೇಟಿ ನೀಡುತ್ತಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬಿಜೆಪಿ ಆಯೋಜಿಸಿರುವ ರ್ಯಾಲಿಗಳಲ್ಲಿ ಭಾಗಿಯಾಗಲಿದ್ದಾರೆ.
ಹುಡ್ಕೋ ಯೋಜನೆಯ ಅಡಿಯಲ್ಲಿ ಕಡುಬಡವರಿಗೆ ಗೃಹ ನಿರ್ಮಾಣಕ್ಕಾಗಿ ನಡೆಯಲಾಗಿದ್ದ ಸಮಾರಂಭದಲ್ಲಿ ಪಾಲ್ಗೊಳ್ಳುವ ಸಲುವಾಗಿ 1982ರಲ್ಲಿ ಇಂದಿರಾ ಗಾಂಧಿಯವರು ಗದಗ ಜಿಲ್ಲೆಗೆ ಅಧಿಕೃತವಾಗಿ ಭೇಟಿ ನೀಡಿದ್ದರು. ಅಂದು ಗದಗ ಜಿಲ್ಲೆ ಅವಿಭಜಿತ ಧಾರವಾಡದ ಭಾಗವಾಗಿತ್ತು. ಇದೀಗ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರಾಜಕೀಯದ ಉದ್ದೇಶದಿಂದ ಗದಗ ಜಿಲ್ಲೆಗೆ ಬೇಟಿ ನೀಡುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics