ನಿಂತಿದ್ದ ಲಾರಿಗೆ ಕಾರು ಢಿಕ್ಕಿ, ಬಂಗಾರಪೇಟೆ ತಹಶೀಲ್ದಾರ್ ಸಾವು!
ಬೆಂಗಳೂರಿನಲ್ಲಿ ಗುರುವಾರ ನಡೆದ ರಸ್ತೆ ಅಪಘಾತದಲ್ಲಿ ಬಂಗಾರಪೇಟೆ ತಹಶೀಲ್ದಾರ್ ಎಂ.ಎಸ್. ಸತ್ಯಪ್ರಕಾಶ್ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಬೆಂಗಳೂರು: ಬೆಂಗಳೂರಿನಲ್ಲಿ ಗುರುವಾರ ನಡೆದ ರಸ್ತೆ ಅಪಘಾತದಲ್ಲಿ ಬಂಗಾರಪೇಟೆ ತಹಶೀಲ್ದಾರ್ ಎಂ.ಎಸ್. ಸತ್ಯಪ್ರಕಾಶ್ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಗುರುವಾರ ಬೆಳಗ್ಗೆ ಬೆಂಗಳೂರು ಹೊರವಲಯದ ಹೆಬ್ಬಾಳದ ಭದ್ರಪ್ಪ ಲೇಔಟ್ನಲ್ಲಿ ಈ ದುರ್ಘಟನೆ ನಡೆದಿದ್ದು, ವೇಗವಾಗಿ ಬಂದ ತಹಶೀಲ್ದಾರ್ ಎಂ ಎಸ್ ಸತ್ಯ ಪ್ರಕಾಶ್ ಅವರ ಕಾರು ನಿಂತಿದ್ದ ಲಾರಿಗೆ ಢಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ಸತ್ಯಪ್ರಕಾಶ್ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ದುರಂತಕ್ಕೆ ಕಾರಿನ ಅತಿಯಾದ ವೇಗವೇ ಕಾರಣ ಎನ್ನಲಾಗಿದೆ. ಇನ್ನು ಹೆಬ್ಬಾಳ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈಗ್ಗೆ ಕೇವಲ ನಾಲ್ಕು ತಿಂಗಳ ಹಿಂದೆ ಮೃತ ತಹಸೀಲ್ದಾರ್ ಲೋಕಾಯುಕ್ತರ ಬಲೆಗೆ ಬಿದ್ದು ಅಮಾನತುಗೊಂಡಿದ್ದರು ಎಂದು ತಿಳಿದುಬಂದಿದೆ.