ಸುಪ್ರೀಂ ಆದೇಶದಂತೆ ಕರ್ನಾಟಕ ತಮಿಳುನಾಡಿಗೆ ನೀರು ಬಿಡುವ ಸ್ಥಿತಿಯಲ್ಲಿಲ್ಲ: ಎಂ.ಬಿ.ಪಾಟೀಲ್
ಸುಪ್ರೀಂ ಕೋರ್ಟ್ ಆದೇಶದಂತೆ ತಮಿಳುನಾಡಿಗೆ ನಾಲ್ಕು ಟಿಎಂಸಿ ನೀರುವ ಬಿಡುವ ಪರಿಸ್ಥಿತಿಯಲ್ಲಿ ಕರ್ನಾಟಕ ಇಲ್ಲ....
ಬೆಂಗಳೂರು: ಸುಪ್ರೀಂ ಕೋರ್ಟ್ ಆದೇಶದಂತೆ ತಮಿಳುನಾಡಿಗೆ ನಾಲ್ಕು ಟಿಎಂಸಿ ನೀರುವ ಬಿಡುವ ಪರಿಸ್ಥಿತಿಯಲ್ಲಿ ಕರ್ನಾಟಕ ಇಲ್ಲ ಎಂದು ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ಅವರು ಗುರುವಾರ ಹೇಳಿದ್ದಾರೆ.
ಸುಪ್ರೀಂ ಕೋರ್ಟ್ ಆದೇಶದ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಎಂ.ಬಿ.ಪಾಟೀಲ್, ರಾಜ್ಯದ ಕಾವೇರಿನದಿಯ ಅಣೆಕಟ್ಟುಗಳಲ್ಲಿ ನೀರಿನ ಅಭಾವ ಇರುವ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ಆದೇಶವನ್ನು ಪಾಲಿಸುವುದು ಕಷ್ಟಕರ ಎಂದಿದ್ದಾರೆ.
ಕಾವೇರಿ ಅಣೆಕಟ್ಟುಗಳಲ್ಲಿ 9 ಟಿಎಂಸಿ ನೀರಿದೆ. ಇದು ರಾಜ್ಯದ ಉಪಯೋಗಕ್ಕೂ ಸಾಲದು. ಹೀಗಾಗಿ ತಮಿಳುನಾಡಿಗೆ ನೀರು ಬಿಡುವುದು ಕಷ್ಟಸಾಧ್ಯ. ರಾಜ್ಯದ ಬಳಕೆಗೆ ನೀರು ಇಲ್ಲದ ಪರಿಸ್ಥಿತಿಯಲ್ಲಿ ಸುಪ್ರೀಂ ಕೋರ್ಟ್ 4ಟಿಎಂಸಿ ನೀರು ಬಿಡಬೇಕು ಎಂದು ನೀಡಿರುವ ಆದೇಶವನ್ನು ಪಾಲಿಸುವುದು ಕಷ್ಟ ಎಂದು ಅವರು ಹೇಳಿದ್ದಾರೆ.
ಈ ಸುಪ್ರೀಂ ಆದೇಶದ ಕುರಿತು ನಾವು ಕಾನೂನು ತಜ್ಞರೊಂದಿಗೆ ಚರ್ಚಿಸುತ್ತೇವೆ ಮತ್ತು ನಮ್ಮ ಅಣೆಕಟ್ಟುಗಳಲ್ಲಿರುವ ನೀರಿನ ಲಭ್ಯತೆ ಕುರಿತು ಸುಪ್ರೀಂ ಕೋರ್ಟ್ಗೆ ಮನವರಿಕೆ ಮಾಡಿಕೊಡುತ್ತೇವೆ ಎಂದು ಸಚಿವರು ತಿಳಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.