ಚಾಮರಾಜನಗರ: ಬೈಕ್ ಗೆ ಪೋಲೀಸ್ ಜೀಪ್ ಡಿಕ್ಕಿ, ಯುವಕ ಸಾವು 
ರಾಜ್ಯ

ಚಾಮರಾಜನಗರ: ಬೈಕ್ ಗೆ ಪೋಲೀಸ್ ಜೀಪ್ ಡಿಕ್ಕಿ, ಯುವಕ ಸಾವು

ಬೈಕ್ ಗೆ ಪೋಲೀಸ್ ಜೀಪ್ ಡಿಕ್ಕಿಯಾಗಿ ತೀವ್ರ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸಲ್ದೆ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಬಸವಟ್ಟಿ ಗ್ರಾಮದಲ್ಲಿ ನಡೆದಿದೆ.

ಚಾಮರಾಜನಗರ: ಬೈಕ್ ಗೆ ಪೋಲೀಸ್ ಜೀಪ್ ಡಿಕ್ಕಿಯಾಗಿ ತೀವ್ರ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಬಸವಟ್ಟಿ ಗ್ರಾಮದಲ್ಲಿ ನಡೆದಿದೆ.
ಸಂತೇಮರಹಳ್ಳಿ ಮೈಸೂರು ರಸ್ತೆಯ ಬಸವಟ್ಟಿ ಗೇಟ್ ಸಮೀಪ ಬೈಕ್ ನಲ್ಲಿ ಬರುತ್ತಿದ್ದ ಶಂಭುಲಿಂಗಪ್ಪ (ಚಿಕ್ಕಣ್ಣ) ಅವರ ವಾಹನಕ್ಕೆ ಡಿವೈಎಸ್​ಪಿ ಜಯಕುಮಾರ್ ಪ್ರಯಾಣಿಸುತ್ತಿದ್ದ ಪೊಲೀಸ್ ಜೀಪ್ ಡಿಕ್ಕಿಯಾಗಿದೆ. 
ಶುಕ್ರವಾರ ನಡೆದ ಘಟನೆಯಲ್ಲಿ ಶಂಭುಲಿಂಗಪ್ಪ ಅವರ ತಲೆಗೆ ಗಂಭೀರ ಗಾಯಗಲಾಗಿದ್ದವು. ಸ್ಥಳೀಯರೆಲ್ಲ ಸೇರಿ ತಕ್ಷಣ ಅವರನ್ನು ಮೈಸೂರಿನ ಜೆಎಸ್‌ಎಸ್‌  ಆಸ್ಪತ್ರೆಗೆ ಸಾಖಲಿಸಿದರು. ಆದರೆ ಚಿಕಿತ್ಸೆ ಫಲ ನೀಡದ ಕಾರಣ ಅವರು ಮೃತಪಟ್ಟಿದ್ದಾನೆ
ಘಟನೆ  ವೇಳೆ ಪೋಲೀಸ್ ಜೀಪ್ ನಿಯಂತ್ರಣ ಕಳೆದುಕೊಂಡು ರಸ್ತೆ ಪಕ್ಕದ ಹೊಲಕ್ಕೆ ನುಗ್ಗಿತ್ತು. ಆದರೆ ಅಪಘಾತಕ್ಕೆ ಕಾರಣವಾದ ಪೋಲೀಸ್ ಜೀಪಿನಲ್ಲಿದ್ದ ಹಿರಿಯ ಅಧಿಕಾರಿ ಸೇರಿದಂತೆ ನಾಲ್ಕೈದು ಪೊಲೀಸ್‌ ಸಿಬ್ಬಂದಿ ತಕ್ಷಣ ವಾಹನದಿಂದಿಳಿದರಲ್ಲದೆ ರಸ್ತೆಗೆ ಓಡಿ ಬಸ್ ಹತ್ತಿ ಪರಾರಿಯಾಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ಆರೋಪಿಸಿದ್ದಾರೆ.
ಇದಕ್ಕೆ ಮುನ್ನ ಪೋಲೀಸರ ವಿರುದ್ಧ ತೀವ್ರ ಆಕ್ರೋಶಗೊಂಡ ಗ್ರಾಮಸ್ಥರು ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.ಆಗ ಪರಿಸ್ಥಿತಿ ತಿಳಿಗೊಳಿಸುವುದಕ್ಕಾಗಿ ಪೋಲೀಅರು ಲಘು ಲಾಠಿ ಪ್ರಹಾರ ನಡೆಸಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ವಿದೇಶದಲ್ಲೂ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ಅಮೆರಿಕಾ ಸೇರಿದಂತೆ ಮೂರು ರಾಷ್ಟ್ರಗಳಿಗೆ ರಫ್ತು..!

CLP ಸಭೆಯಲ್ಲಿ ಸರ್ವಾನುಮತದಿಂದ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿತ್ತು, 50:50 ಒಪ್ಪಂದವಾಗಿಲ್ಲ: ಕೆ.ಜೆ. ಜಾರ್ಜ್ ಸ್ಪಷ್ಟನೆ

SCROLL FOR NEXT