ಚಿತ್ರದುರ್ಗ:ವಿಧಾನಸಭೆ ಚುನಾವಣೆಯ ಪ್ರಚಾರ ನಡೆಸುತ್ತಿರುವಾಗಲೇ ಕುಸಿದು ಬಿದ್ದ ಸಚಿವ ಎಚ್. ಆಂಜನೇಯ ಅವರನ್ನು ಆಸ್ಪತ್ರೆಗೆ ದಾಖಲಿಸಿಅಲಾಗಿದೆ.
ಶನಿವಾರದಂದು ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ವ್ಯಾಪ್ತಿ ಇಸಾಮುದ್ರ ಗ್ರಾಮದಲ್ಲಿ ಪ್ರಚಾರ ಕೈಗೊಂಡಿದ್ದ ವೇಳೆ ಸಚಿವರು ಕುಸಿದು ಬಿದ್ದು ಅಸ್ವಸ್ಥಗೊಂಡಿದ್ದಾರೆ.
ಚಿತ್ರದುರ್ಗ ಸೀಮೆಯ ಬಿರುಬಿಸಿಲಿನಲ್ಲಿ ತೆರೆದ ವಾಹನದಲ್ಲಿ ಪ್ರಚಾರ ಕೈಗೊಂಡಿದ್ದ ಸಚಿವ ಆಂಜನೇಯ ಅವರಿಗೆ ತಲೆಸುತ್ತು ಹಾಗೂ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣ ಸ್ಥಳದಲ್ಲಿದ್ದ ವೈದ್ಯ ಡಾ.ಸತೀಶ್ ಚಿಕಿತ್ಸೆ ಮಾಡಿದ್ದಾರೆ. ಆ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ದಾವಣಗೆರೆ ಎಸ್.ಎಸ್. ನಾರಾಯಣ ಹೃದಯಾಲಯಕ್ಕೆ ದಾಖಲು ಮಾಡಲಾಗಿದೆ.
ಸಧ್ಯ ವೈದ್ಯರ ಅಬ್ಸರ್ವೇಷನ್ನಲ್ಲಿರುವ ಸಚಿವರು ಒಂದು ದಿನ ಆಸ್ಪತ್ರೆಯಲ್ಲೇ ಉಳಿಯಲಿದ್ದಾರೆ. ಸಚಿವರ ಆರೋಗ್ಯ ಹದಗೆಟ್ಟ ಕಾರಣ ಅವರ ಕುಟುಂಬಸ್ಥರು, ಪಕ್ಷದ ಕಾರ್ಯಕರ್ತರಲ್ಲಿ ತೀವ್ರ ಆತಂಕ ಉಂತಾಗಿದೆ.