ಸಂಗ್ರಹ ಚಿತ್ರ 
ರಾಜ್ಯ

SSLC: ಸರ್ಕಾರಿ ಶಾಲೆಗಳ ಫಲಿತಾಂಶ ಉತ್ತಮ, ಶೇ.75.12ರಷ್ಟು ಫಲಿತಾಂಶ

2017-18ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಪ್ರಕಟಿಸಲಾಗಿದ್ದು, ಕಳೆದ ಬಾರಿಗಿಂತ ಈ ಭಾರಿಯ ಫಲಿತಾಂಶದಲ್ಲಿ ಶೇ. 4.06ರಷ್ಟು ಏರಿಕೆ ಕಂಡುಬಂದಿದೆ.

ಬೆಂಗಳೂರು: 2017-18ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಪ್ರಕಟಿಸಲಾಗಿದ್ದು, ಕಳೆದ ಬಾರಿಗಿಂತ ಈ ಭಾರಿಯ ಫಲಿತಾಂಶದಲ್ಲಿ ಶೇ. 4.06ರಷ್ಟು ಏರಿಕೆ ಕಂಡುಬಂದಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ, 2017-18ನೇ ಸಾಲಿನಲ್ಲಿ ಒಟ್ಟಾರೆ ಫಲಿತಾಂಶದಲ್ಲಿ ಶೇ. 4.06ರಷ್ಟು ಏರಿಕೆಯಾಗಿದೆ ಎಂದು ಮಾಹಿತಿ ನೀಡಿದೆ. ಪ್ರಸಕ್ತ ಸಾಲಿನಲ್ಲಿ ಒಟ್ಟು 838088 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಈ ಪೈಕಿ 602802 ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಆ ಮೂಲಕ ಒಟ್ಟಾರೆ ಫಲಿತಾಂಶ 71.93ರಷ್ಟಿದ್ದು, 2016-17ನೇ ಸಾಲಿನಲ್ಲಿ 67.87ರಷ್ಟು ಫಲಿತಾಂಶ ಬಂದಿತ್ತು.
ಉತ್ತೀರ್ಣರಾದ ಗಂಡು ಮಕ್ಕಳ ಪ್ರಮಾಣ ಶೇ 66.56(ಶೇ 3.95 ಏರಿಕೆ), ಉತ್ತೀರ್ಣರಾದ ವಿದ್ಯಾರ್ಥಿನಿಯರು ಶೇ 78.01(ಶೇ 3.76 ಏರಿಕೆ). ನಗರ ಭಾಗಕ್ಕಿಂತಲೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಉತ್ತೀರ್ಣ ಪ್ರಮಾಣ ಶೇ 4.62ರಷ್ಟು ಹೆಚ್ಚಿದೆ. ನಗರ ಭಾಗದ ವಿದ್ಯಾರ್ಥಿಗಳು ಶೇ 69.38 ಹಾಗೂ ಗ್ರಾಮೀಣ ಭಾಗದ ಶೇ 74 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಇಬ್ಬರು ವಿದ್ಯಾರ್ಥಿಗಳಿಗೆ ಸಂಪೂರ್ಣ 625 ಅಂಕ
ಇನ್ನು ಹಾಲಿ ಫಲಿತಾಂಶದಲ್ಲಿ ಇಬ್ಬರು ವಿದ್ಯಾರ್ಥಿಗಳು ಸಂಪೂರ್ಣ ಅಂದರೆ 625 ಅಂಕಗಳನ್ನು ಗಳಿಸಿದ್ದು, ಮೈಸೂರಿನ ಸದ್ವಿದ್ಯಾ ಹೈಸ್ಕೂಲ್‌ ನ ಯಶಸ್‌.ಎಂ.ಎಸ್‌ ಹಾಗೂ ಬೆಂಗಳೂರಿನ ಹೋಲಿ ಟೈಲ್ಡ್‌ ಹೈಸ್ಕೂಲ್‌ನ ಸುದರ್ಶನ್‌ ಕೆ.ಎಸ್‌. 625ಕ್ಕೆ 625 ಅಂಕ ಗಳಿಸಿ ಪ್ರಥಮ ಸ್ಥಾನದಲ್ಲಿದ್ದಾರೆ. 
ಒಟ್ಟು ಎಂಟು ವಿದ್ಯಾರ್ಥಿಗಳು 624 ಅಂಕ ಹಾಗೂ 12 ವಿದ್ಯಾರ್ಥಿಗಳು 623 ಅಂಕ, 22 ವಿದ್ಯಾರ್ಥಿಗಳು 622 ಅಂಕ ಹಾಗೂ 35 ವಿದ್ಯಾರ್ಥಿಗಳು 621 ಅಂಕ ಗಳಿಸಿದ್ದಾರೆ.
ಸರ್ಕಾರಿ ಶಾಲೆಗಳ ಫಲಿತಾಂಶ ಉತ್ತಮ
ಇನ್ನು ಖಾಸಗಿ ಶಾಲೆಗಳ ಅಬ್ಬರದಲ್ಲಿ ಮಂಕಾಗಿದ್ದ ಸರ್ಕಾರಿ ಶಾಲೆಗಳ ಫಲಿತಾಂಶ ಕೂಡ ಉತ್ತಮವಾಗಿದ್ದು, ಒಟ್ಟು 5, 191 ಸರ್ಕಾರಿ ಶಾಲೆಗಳಿಂದ 2, 85, 594 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಈ ಪೈಕಿ 2, 14, 545 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಆ ಮೂಲಕ ಸರ್ಕಾರಿ ಶಾಲೆಗಳ ಒಟ್ಟಾರೆ ಫಲಿತಾಂಶ 75.12ಕ್ಕೆ ಏರಿಕೆಯಾಗಿದೆ. ಉಳಿದಂತೆ ಅನುದಾನಿತ ಶಾಲೆಗಳ ಫಲಿತಾಂಶ 76.27ರಷ್ಟಿದ್ದು, ಅನುದಾನ ರಹಿತ ಶಾಲೆಗಳಲ್ಲಿನ ಫಲಿತಾಂಶ 8.05ರಷ್ಟಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT