ಸಾಂದರ್ಭಿಕ ಚಿತ್ರ 
ರಾಜ್ಯ

ಎಸ್ಎಸ್ಎಲ್‏ಸಿ ಫಲಿತಾಂಶ: ಉಡುಪಿ ಪ್ರಥಮ, ಯಾದಗಿರಿ ಲಾಸ್ಟ್, ಗ್ರಾಮೀಣ ವಿದ್ಯಾರ್ಥಿಗಳದ್ದೇ ಮೇಲುಗೈ

2017-18ನೇ ಸಾಲಿನ ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟವಾಗಿದೆ, ಈ ಬಾರಿ ಶೇ.71.93ರಷ್ಟು ಫಲಿತಾಂಶ ದಾಖಲಾಗಿದೆ. ನಿರೀಕ್ಷೆಯಂತೆ ಉಡುಪಿ ಪ್ರಥಮ ಸ್ಥಾನ ಗಳಿಸಿದೆ.

ಬೆಂಗಳೂರು: 2017-18ನೇ ಸಾಲಿನ ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟವಾಗಿದೆ, ಈ ಬಾರಿ ಶೇ.71.93ರಷ್ಟು ಫಲಿತಾಂಶ ದಾಖಲಾಗಿದೆ. ನಿರೀಕ್ಷೆಯಂತೆ ಉಡುಪಿ ಪ್ರಥಮ, ಉತ್ತರ ಕನ್ನಡ ದ್ವಿತೀಯ, ಚಿಕ್ಕೋಡಿ ತೃತೀಯ ಹಾಗೂ ಯಾದಗಿರಿ ಕೊನೆಯ ಸ್ಥಾನ ಪಡೆದಿದೆ.
ಕಳೆದ ಬಾರಿಗಿಂತ ಈ ಬಾರಿ ಉತ್ತಮ ಫಲಿತಾಂಶ ಬಂದಿದೆ. ಕಳೆದ ಬಾರಿ ಶೇ67.87ರಷ್ಟು ಫಲಿತಾಂಶ ಬಂದಿತ್ತು.ಮಾರ್ಚ್ 23ರಿಂದ ಏಪ್ರಿಲ್ 6ರವರೆಗೆ ನಡೆದ ಎಸ್ಸೆಎಸ್ಸೆಲ್ಸಿ ಪರೀಕ್ಷೆಯಲ್ಲಿ ಒಟ್ಟು 8,38,424 ವಿದ್ಯಾರ್ಥಿಗಳು ಬರೆದಿದ್ದರು. ಏಪ್ರಿಲ್ 15ರಿಂದ 25ರವರೆಗೆ ಉತ್ತರ ಪತ್ರಿಕೆ ಮೌಲ್ಯಮಾಪನ ನಡೆದಿತ್ತು.
ಗ್ರಾಮೀಣ ಭಾಗದ ವಿದ್ಯಾರ್ಥಿಗಳೇ ಮೇಲುಗೈ ಸಾಧಿಸಿದ್ದಾರೆ. ಶೇ. 74 ರಷ್ಟು ಫಲಿತಾಂಶ ಪಡೆದಿದ್ದಾರೆ. 625 ಕ್ಕೆ ಇಬ್ಬರು ವಿದ್ಯಾರ್ಥಿಗಳು 625 ಅಂಕ ಗಳಿಸಿದ್ದಾರೆ, 625 ಅಂಕಕ್ಕೆ 8 ವಿದ್ಯಾರ್ಥಿಗಳು 624 ಅಂಕಗಳನ್ನು ಪಡೆದಿದ್ದಾರೆ.  625 ಕ್ಕೆ 12 ವಿದ್ಯಾರ್ಥಿಗಳು 623 ಅಂಕಗಳನ್ನು ಪಡೆದಿದ್ದಾರೆ.  ರಾಜ್ಯದ ಎಲ್ಲಾ ಪ್ರೌಢಶಾಲೆಗಳಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಇಂದು ಪ್ರೌಢಶಿಕ್ಷಣ ಮಂಡಳಿ ವೆಬ್ ಸೈಟ್ ನಲ್ಲಿ ಮಧ್ಯಾಹ್ನ 1ಗಂಟೆಗೆ ಫಲಿತಾಂಶ ಲಭ್ಯವಾಗಲಿದೆ.
ಉಡುಪಿ ಜಿಲ್ಲೆ ಶೇ 88.18 ರಷ್ಟು ಫಲಿತಾಂಶ ಪಡೆದು ಪ್ರಥಮ ಸ್ಥಾನದಲ್ಲಿದ್ದರೆ, ಯಾದಗಿರಿ ಶೇ 35.54 ಫಲಿತಾಂಶದೊಂದಿಗೆ ಕೊನೆಯ ಸ್ಥಾನದಲ್ಲಿದೆ. ಸರ್ಕಾರಿ ಶಾಲೆಗಳಲ್ಲಿ ಶೇ 75.12 ರಷ್ಟು ಹಾಗೂ ರಾಜ್ಯದ 43 ಶಾಲೆಗಳಲ್ಲಿ ಶೂನ್ಯ ಫಲಿತಾಂಶ ಬಂದಿದೆ. ಕಳೆದ ಬಾರಿ 16 ನೇ ಸ್ಥಾನದಲ್ಲಿದ್ದ ಯಾದಗಿರಿ ಈ ಬಾರಿ ಕೊನೆಯ ಸ್ಥಾನಕ್ಕೆ ಇಳಿದಿದೆ. 
http://karresults.nic.in/ ಮತ್ತು http://kseeb.kar.nic.in/ ನಲ್ಲಿ ಎಸ್ ಎಸ್ ಎಲ್ ಸಿ ಫಲಿತಾಂಶ ನೋಡಬಹುದಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel