ರಾಜ್ಯ

ವಿಧಾನಸಭೆ ಚುನಾವಣೆ: ರಾಜ್ಯಾದ್ಯಂತ 1.5 ಲಕ್ಷ ಭದ್ರತಾ ಸಿಬ್ಬಂದಿ ನಿಯೋಜನೆ

Lingaraj Badiger
ಬೆಂಗಳೂರು: ಮೇ 12ರಂದು ನಡೆಯಲಿರುವ ರಾಜ್ಯ ವಿಧಾನಸಭೆ ಚುನಾವಣೆಗೆ 50 ಸಾವಿರ ಅರೆ ಸೇನಾಪಡೆ ಸಿಬ್ಬಂದಿ ಸೇರಿದಂತೆ ಒಟ್ಟು 1.5 ಲಕ್ಷ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಬುಧವಾರ ಅಧಿಕಾರಿಗಳು ತಿಳಿಸಿದ್ದಾರೆ.
ರಾಜ್ಯದಲ್ಲಿ ಶಾಂತಿಯುತ ಮತದಾನಕ್ಕಾಗಿ ಕೇಂದ್ರ ಗೃಹ ಸಚಿವಾಲಯ ಸಿಆರ್ ಪಿಎಫ್, ಬಿಎಸ್ಎಫ್ ಮತ್ತು ಐಟಿಬಿಪಿ ಸೇರಿದಂತೆ ಒಟ್ಟು 520 ಅರೆ ಸೇನಾಪಡೆ ತುಕಡಿಗಳನ್ನು ರಾಜ್ಯಕ್ಕೆ ನೀಡಿದೆ ಎಂದು ಅವರು ಹೇಳಿದ್ದಾರೆ.
ಒಂದೇ ಹಂತದ ಚುನಾವಣೆಯಲ್ಲಿ ಕೇಂದ್ರ ಸರ್ಕಾರದ ಭದ್ರತಾ ಸಿಬ್ಬಂದಿ ರಾಜ್ಯ ಸುಮಾರು 1 ಲಕ್ಷ ಭದ್ರತಾ ಸಿಬ್ಬಂದಿಗೆ ನೆರವಾಗಲಿದ್ದಾರೆ ಎಂದು ಗೃಹ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.
ಅರೆ ಸೇನಾಪಡೆ ಸಿಬ್ಬಂದಿ ಈಗಾಗಲೇ ರಾಜ್ಯಕ್ಕೆ ಆಗಮಿಸಿದ್ದು, ನಿಯೋಜಿತ ಸ್ಥಳಕ್ಕೆ ತೆರಳುತ್ತಿದ್ದಾರೆ ಎಂದು ಮತ್ತೊಬ್ಬ ಅಧಿಕಾರಿ ಹೇಳಿದ್ದಾರೆ.
ಮೇ 12ರಂದು 223 ವಿಧಾನಸಭಾ ಕ್ಷೇತ್ರಗಳಲ್ಲಿ ಒಂದೇ ಹಂತದ ಮತದಾನ ನಡೆಯಲಿದ್ದು, 4.96 ಕೋಟಿ ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ.
SCROLL FOR NEXT