ಮತದಾನ ಮಾಡಿದ ಅಕೈ ಪದ್ಮಶಾಲಿ 
ರಾಜ್ಯ

16 ವರ್ಷದ ಕಾಯುವಿಕೆ ಅಂತ್ಯ, ಕೊನೆಗೂ ಮತದಾನ ಮಾಡಿದ ಅಕೈ ಪದ್ಮಶಾಲಿ

ರಾಜ್ಯ ವಿಧಾನಸಭೆ ಚುನಾವಣೆ ಮತದಾನ ಹಲವು ವಿಶೇಷತೆಗಳಿಗೆ ಕಾರಣವಾಗಿದ್ದು, ಇದೀಗ ಮತ್ತೊಂದು ಸೇರ್ಪಡೆ ಎಂಬಂತೆ ಇದೇ ಮೊದಲ ಬಾರಿಗೆ ತೃತೀಯ ಲಿಂಗಿಯೊಬ್ಬರು ಮತದಾನ ಮಾಡುವ ಮೂಲಕ ದಾಖಲೆ ನಿರ್ಮಾಣ ಮಾಡಿದ್ದಾರೆ.

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಮತದಾನ ಹಲವು ವಿಶೇಷತೆಗಳಿಗೆ ಕಾರಣವಾಗಿದ್ದು, ಇದೀಗ ಮತ್ತೊಂದು ಸೇರ್ಪಡೆ ಎಂಬಂತೆ ಇದೇ ಮೊದಲ ಬಾರಿಗೆ ತೃತೀಯ ಲಿಂಗಿಯೊಬ್ಬರು ಮತದಾನ ಮಾಡುವ ಮೂಲಕ ದಾಖಲೆ ನಿರ್ಮಾಣ ಮಾಡಿದ್ದಾರೆ.
ಹೌದು..ಲೈಂಗಿಕ ಅಲ್ಪಸಂಖ್ಯಾತ ಅಥವಾ ಮಂಗಳಮುಖಿಯರ ಪರ ಹೋರಾಟಗಾರ್ತಿ ರಾಜ್ಯೋತ್ಸವ ಪ್ರಶಸ್ತಿ ವಿಜೇತೆ ಅಕೈ ಪದ್ಮಶಾಲಿ ಅವರು ವಿಧಾನಸಭೆ ಚುನಾವಣೆಯಲ್ಲಿ ಮತದಾನ ಮಾಡಿದ್ದಾರೆ. ಈ ಬಗ್ಗೆ ಫೇಸ್ ಬುಕ್ ನಲ್ಲಿ ವಿಡಿಯೋ ಅಪ್ಲೋಡ್ ಮಾಡಿರುವ ಅವರು, ತಮ್ಮ 16 ವರ್ಷಗಳ ಸತತ ಹೋರಾಟಕ್ಕೆ ಫಲ ಸಂದಿದ್ದು, ಇದೇ ಮೊದಲ ಬಾರಿಗೆ ತಾವು ತಮ್ಮ ಹಕ್ಕನ್ನು ಚಲಾಯಿಸಿದ್ದೇನೆ. ನೀವೂ ಕೂಡ ನಿಮ್ಮ ಹಕ್ಕು ಚಲಾಯಿಸುವ ಮೂಲಕ ಪ್ರಜ್ಞಾವಂತ ಪ್ರಜೆಯಾಗಿ ಎಂದು ಕರೆ ನೀಡಿದ್ದಾರೆ.
ಕಳೆದ 16 ವರ್ಷಗಳಿಂದ ನಾನು ನನ್ನ ಹಕ್ಕಿಗಾಗಿ ಹೋರಾಟ ನಡೆಸಿದ್ದೆ, ಆದರೆ ಈ ಬಾರಿ ನಾನು ನನ್ನ ಹಕ್ಕು ಚಲಾಯಿಸಿದ್ದೇನೆ. ತುಂಬಾ ಖುಷಿಯಾಗುತ್ತಿದೆ. ನೀವೂ ಕೂಡ ನಿಮ್ಮ ಹಕ್ಕು ಚಲಾಯಿಸಿ ಎಂದು ಪದ್ಮಶಾಲಿ ಹೇಳಿದ್ದಾರೆ.
ಇನ್ನು ಈ ಹಿಂದೆ ತಮ್ಮ ವಿವಾಹ ನೋಂದಣಿ ಮಾಡಿಸುವ ಮೂಲಕವೂ ದಾಖಲೆ ಬರೆದಿದ್ದರು. ತಮ್ಮ ಹೋರಾಟಗಳ ಮೂಲಕವೇ ಖ್ಯಾತಿಗಳಿಸಿರುವ ಅಕೈ ಪದ್ಮಶಾಲಿ ಅವರಿಗೆ ರಾಜ್ಯ ಸರ್ಕಾರ ಇತ್ತೀಚೆಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್