ಬೆಂಗಳೂರು: ರಾಜ್ಯಾದ್ಯಂತ ನಡೆಯುತ್ತಿರುವ ಮತದಾನ ಪ್ರಕ್ರಿಯೆ ಬಿರುಸಿನಿಂದ ಸಾಗಿದ್ದು, ಮಧ್ಯಾಹ್ನ 3 ಗಂಟೆ ಹೊತ್ತಿಗೆ ಶೇ.56ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ.
ಕರ್ನಾಟಕ ವಿಧಾನಸಭೆಗೆ ನಡೆಯುತ್ತಿರುವ ಚುನಾವಣೆಯಲ್ಲಿ ಬಿರುಸಿನ ಮತದಾನವಾಗುತ್ತಿದ್ದು, ಮಧ್ಯಾಹ್ನ 3ರ ಹೊತ್ತಿಗೆ ರಾಜ್ಯಾದ್ಯಂತ ಶೇ. 56ರಷ್ಟು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇ. 46 ರಷ್ಟು ಮತದಾನವಾಗಿತ್ತು ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ.
ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಯಿತಾದರೂ, ಹಲವೆಡೆ ಮತಯಂತ್ರಗಳು ಕೈಕೊಟ್ಟ ಪರಿಣಾಮ ಮತದಾನ ತಡವಾಯಿತು. ಇನ್ನು ಹಲವು ಮತಗಟ್ಟೆಗಳಲ್ಲಿ ವಿದ್ಯುತ್ ಕೈ ಕೊಟ್ಟ ಕಾರಣ ಚುನಾವಣಾ ಸಿಬ್ಬಂದಿ ಗೊಂದಲಕ್ಕೀಡಾದರು. ಇನ್ನು ಬೆಂಗಳೂರಿನ ಎರಡು ಕಡೆ ನಕಲಿ ಮತದಾನ ಆರೋಪ ಹಿನ್ನೆಲೆಯಲ್ಲಿ ಬಸವನಗುಡಿ ಕ್ಷೇತ್ರದ ಶ್ರೀನಗರದಲ್ಲಿ ಶ್ರೀನಗರದಿಂದ ನಾಗಮಂಗಲ ಕ್ಷೇತ್ರಕ್ಕೆ ತೆರಳುತ್ತಿದ್ದ ಬಸ್ ಅಡ್ಡಗಟ್ಟಿ ಸ್ಥಳೀಯರು ಗಲಾಟೆ ಮಾಡಿದ್ದಾರೆ.
ಇನ್ನು ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದ್ದು, ಬೆಳಗ್ಗೆ 9.15ರವರೆಗೂ ರಾಜ್ಯಾದ್ಯಂತ ಶೇ.11ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ. ಬೆಳಗಿನಿಂದಲೇ ಮತಗಟ್ಟೆಗೆ ಆಗಮಿಸುತ್ತಿರುವ ಮತದಾರರು ಸರತಿ ಸಾಲಲ್ಲಿ ನಿಂತು ಮತದಾನ ಮಾಡುತ್ತಿದ್ದಾರೆ.
ರಾಜ್ಯಾದ್ಯಂತ ನಡೆಯುತ್ತಿರುವ ಮತದಾನ ಪ್ರಕ್ರಿಯೆ ಬಿರುಸಿನಿಂದ ಸಾಗಿದ್ದು, ಬೆಳಗ್ಗೆ 11 ಗಂಟೆ ಹೊತ್ತಿಗೆ ಶೇ.24ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ.
ಬೆಳಗ್ಗೆ 11 ಗಂಟೆಯವರೆಗೆ ಬೆಳಗಾವಿಯಲ್ಲಿ ಶೇ. 26.6, ಬಾಗಲಕೋಟೆಯಲ್ಲಿ ಶೇ. 24.98, ವಿಜಯಪುರ ಶೇ. 22.6, ಕಲಬುರಗಿಯಲ್ಲಿ ಶೇ. 22.10, ಯಾದಗಿರಿಯಲ್ಲಿ ಶೇ. 23.5, ಬೀದರ್ನಲ್ಲಿ ಶೇ. 19.4 ರಷ್ಟು ಮತದಾನ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics