ಬೆಂಗಳೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಂದಿರಾ ಕ್ಯಾಂಟೀನ್ ಮತ್ತು ಕೇಂದ್ರೀಕೃತ ಅಡುಗೆ ಮನೆಗಳಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರಿಗೆ ರಜೆ ಘೋಷಿಸಿರುವುದರಿಂದ ಇಂದಿರಾ ಕ್ಯಾಂಟೀನ್ ಮುಚ್ಚಿರುವ ಹಿನ್ನೆಲೆಯಲ್ಲಿ ಬಡ ಜನರು ಆಹಾರಕ್ಕಾಗಿ ಸಂಕಷ್ಟ ಪಡುವಂತಾಗಿದೆ.
ರಾಜ್ಯದ 222 ವಿಧಾನ ಸಭೆ ಕ್ಷೇತ್ರಗಳಿಗೆ ಇಂದು ಮತದಾನ ನಡೆಯುತ್ತಿದೆ. ಬೆಳಗ್ಗೆ 7 ಗಂಟೆಯಿಂದಲೇ ಮತದಾನ ಆರಂಭವಾಗಿದೆ.
ಬೆಂಗಳೂರು ನಗರದ ಹಲವು ಭಾಗಗಳಲ್ಲಿ ಇಂದಿರಾ ಕ್ಯಾಂಟೀನ್ ಆರಂಭವಾಗಿ, ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ ಹಾಗೂ ರಾತ್ರಿ ಊಟವನ್ನು ಅಗ್ಗದ ದರದಲ್ಲಿ ನೀಡಲಾಗುತ್ತಿದೆ. ಇದರಿಂದ ಆಟೋ ಚಾಲಕರು, ಕಾರ್ಮಿಕ ವರ್ಗ ಮತ್ತು ಬಿಪಿಎಲ್ ಕಾರ್ಡ್ ಹೊಂದಿದವರ ಊಟಕ್ಕೆ ಅನುಕೂಲ ವಾಗುತ್ತಿತ್ತು. ಬೆಂಗಳೂರು ನಗರದಲ್ಲಿ ಸುಮಾರು 40 ಇಂದಿರಾ ಕ್ಯಾಂಟೀನ್ ಕಾರ್ಯ ನಿರ್ವಹಿಸುತ್ತಿವೆ.