ಬಳ್ಳಾರಿ; ರಾಜ್ಯ ವಿಧಾನಸಭಾ ಚುನಾವಣೆ ಮತದಾನ ಬಿರುಸಿನಿಂದ ಸಾಗುತ್ತಿದ್ದು, ಮತದಾನಕ್ಕೂ ಮುನ್ನ ಬಿಜೆಪಿ ನಾಯಕ ಬಿ. ಶ್ರೀರಾಮುಲು ಅವರು ಗೋಮಾತೆಗೆ ಪೂಜೆ ಸಲ್ಲಿಸಿದ್ದಾರೆ.
ಶ್ರೀರಾಮುಲು ಅವರು ಬಾದಾಮಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಸೆಣಸಾಟ ನಡೆಸುತ್ತಿದ್ದಾರೆ.
ಬಾದಾಮಿಯಲ್ಲಿ ಕುರುಬ ಸಮುದಾಯ ಹೆಚ್ಚಾಗಿದ್ದು, ಸಿದ್ದರಾಮಯ್ಯ ಆ ಸಮುದಾಯಕ್ಕೆ ಸೇರಿರುವುದರಿಂದ ಎರಡನೇ ಸುರಕ್ಷತೆಯ ಕ್ಷೇತ್ರವಾಗಿ ಆ ಕ್ಷೇತ್ರ ಆಯ್ಕೆ ಮಾಡಿಕೊಳ್ಳುವಂತೆ ಸಮೀಕ್ಷಾ ವರದಿಗಳು ಸಲಹೆ ನೀಡಿದ್ದು ಈ ಹಿನ್ನಲೆಯಲ್ಲಿ ಸಿದ್ದರಾಮಯ್ಯ ಅವರು ಬಾದಾಮಿ ಕ್ಷೇತ್ರದಲ್ಲಿ ಸ್ಪರ್ಧೆಗಿಳಿದಿದ್ದಾರೆಂದು ಹೇಳಲಾಗುತ್ತಿತ್ತು. ಚುನಾವಣೆಯಲ್ಲಿ ಮತ್ತೆ ಗೆಲವು ಸಾಧಿಸಿ, ಬಾದಾಮಿಯಲ್ಲಿ ಸಿದ್ದರಾಮಯ್ಯ ಅವರು ಗೆಲವು ಸಾಧಿಸಿದ್ದೇ ಆದರೆ, ರಾಜ್ಯದಲ್ಲಿ ಉನ್ನತ ಸ್ಥಾನಕ್ಕೇರಲಿದ್ದಾರೆ.