ಬೆಳಗಾವಿ: ಬುರ್ಖಾ ತೆಗೆಯಲು ನಿರಾಕರಿಸಿದ ಮುಸ್ಲಿಂ ಮಹಿಳೆಯೊಬ್ಬರನ್ನು ಮತಗಟ್ಟೆ ಪ್ರವೇಶಿಸದಂತೆ ಚುನಾವಣಾ ಅಧಿಕಾರಿಗಳು ತಡೆದಿದ್ದಾರೆ.
ಬಳಿಕ ಮಹಿಳಾ ಅಧಿಕಾರಿಯೊಬ್ಬರು ಮುಸ್ಲಿಂ ಮಹಿಳೆ ಗುರುತು ಪರಿಶೀಲಿಸಿದ ನಂತರ ಮತದಾನಕ್ಕೆ ಅವಕಾಶ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರಾಜ್ಯದಲ್ಲಿ 222 ವಿಧಾನಸಭಾ ಕ್ಷೇತ್ರಗಳಲ್ಲಿ ಇಂದು ಒಂದೇ ಹಂತದ ಮತದಾನ ನಡೆಯುತ್ತಿದ್ದು, ಶಾಂತಿಯುತ ಮತದಾನಕ್ಕಾಗಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.