ಲೊಟ್ಟೆಗೊಲ್ಲನಹಳ್ಳಿಯಲ್ಲಿ ಮೇ.14 ಕ್ಕೆ ಮರು ಮತದಾನ: ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ 
ರಾಜ್ಯ

ಲೊಟ್ಟೆಗೊಲ್ಲಹಳ್ಳಿಯಲ್ಲಿ ಮೇ.14 ಕ್ಕೆ ಮರು ಮತದಾನ: ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್

ಮತಯಂತ್ರದಲ್ಲಿ ತಾಂತ್ರಿಕ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಹೆಬ್ಬಾಳ ವಿಧಾನಸಭಾ ಕ್ಷೇತ್ರದ ಲೊಟ್ಟೆಗೊಲ್ಲನಹಳ್ಳಿಯ ಮತಗಟ್ಟೆ 2 ರಲ್ಲಿ ಮೇ.14 ರಂದು ಮರುಮತದಾನ ನಡೆಯಲಿದೆ.

ಬೆಂಗಳೂರು: ಮತಯಂತ್ರದಲ್ಲಿ ತಾಂತ್ರಿಕ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಹೆಬ್ಬಾಳ ವಿಧಾನಸಭಾ ಕ್ಷೇತ್ರದ ಲೊಟ್ಟೆಗೊಲ್ಲಹಳ್ಳಿಯ ಮತಗಟ್ಟೆ 2 ರಲ್ಲಿ ಮೇ.14 ರಂದು ಮರುಮತದಾನ ನಡೆಯಲಿದೆ. 
ಮೇ.12 ರಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್, ಲೊಟ್ಟೆಗೊಲ್ಲಹಳ್ಳಿಯ ಮತಗಟ್ಟೆಯಲ್ಲಿನ ಮತಯಂತ್ರದಲ್ಲಿ‌ 9 ನೇ ಸಂಖ್ಯೆಯ ಬಟನ್ ಸರಿಯಾಗಿ ಕೆಲಸ ಮಾಡುತ್ತಿರಲಿಲ್ಲ, ಮತಯಂತ್ರದಲ್ಲಿ ತಾಂತ್ರಿಕ ತೊಂದರೆ ಕಾಣಿಸಿಕೊಂಡಿತ್ತು. ಅದನ್ನು‌ ಸರಿಪಡಿಸಲು ವಿಳಂಬವಾದ ಕಾರಣ ಮತದಾನ ಸರಿಯಾಗಿ ನಡೆಯಲಿಲ್ಲ, ಹಾಗಾಗಿ ಅಲ್ಲಿ‌ ಮತ್ತೊಮ್ಮೆ ಚುನಾವಣೆ ನಡೆಸಲು ನಿರ್ಧರಿಸಲಾಗಿದೆ. 
ಮೇ.12 ರಂದು ಮತದಾನ ಮಾಡಿದವರೂ ಸಹ ಮೇ.14 ರಂದು ಮರುಮತದಾನ ಮಾಡಲಾಗುತ್ತದೆ. ಮರುಮತದಾನದ ಅವಧಿಯನ್ನು ಬೆಳಿಗ್ಗೆ 7 ರಿಂದ ಸಂಜೆ 6 ವರೆಗೆ ನಿಗದಿಪಡಿಸಲಾಗಿದೆ. ಇಂಕ್ ಬಗ್ಗೆ ಶೀಘ್ರವೇ ನಿರ್ಧಾರ ಪ್ರಕಟಿಸಲಾಗುವುದು ಎಂದು ಮುಖ್ಯ ಚುನಾವಣಾಧಿಕಾರಿ ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!