ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರಿನ ಅಲಲ್ಲಿ ಆಲಿಕಲ್ಲು ಸಹಿತ ಭಾರೀ ಮಳೆ

ರಾಜಧಾನಿ ಬೆಂಗಳೂರಿನ ಅಲಲ್ಲಿ ಆಲಿಕಲ್ಲು ಸಹಿತ ಧಾರಾಕಾರ ಮಳೆಯಾಗಿದೆ.ಚಾಮರಾಜಪೇಟೆ, ಹನುಮಂತನಗರ, ಗಿರಿನಗರ ಮೊದಲಾದ ಕಡೆಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗಿದೆ.

ಬೆಂಗಳೂರು : ರಾಜಧಾನಿ ಬೆಂಗಳೂರಿನ ಅಲಲ್ಲಿ   ಆಲಿಕಲ್ಲು ಸಹಿತ ಧಾರಾಕಾರ ಮಳೆಯಾಗಿದೆ.ಚಾಮರಾಜಪೇಟೆ, ಹನುಮಂತನಗರ, ಗಿರಿನಗರ ಮೊದಲಾದ ಕಡೆಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗಿದೆ.

ಮಧ್ಯಾಹ್ನದ ನಂತರ ಮೋಡ ಕವಿದ ವಾತವಾರಣ ಉಂಟಾಗಿ,ಕೆಲ ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗಿದೆ. ಆದರೆ , ಮತ್ತೆ ಕೆಲವು ಕಡೆಗಳಲ್ಲಿ ಮಳೆಯಾಗಿಲ್ಲ. ಮಳೆಯಿಂದಾಗಿ ವಾಹನ ಸವಾರರು ಪರದಾಡುವಂತಾಯಿತು.ಮೆಜೆಸ್ಟಿಕ್,  ಮೈಸೂರು ಬ್ಯಾಂಕ್, ಮೈಸೂರು ರಸ್ತೆ ಮೊದಲಾದ ಕಡೆಗಳಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಯಿತು.

ರಸ್ತೆಗಳಲ್ಲಿ ನೀರು ತುಂಬಿ ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸುವಂತಾಯಿತು. ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿದ್ದು, ಜನಸಾಮಾನ್ಯರು ಪರದಾಡುವಂತಾಯಿತು.

ಲಕ್ಷದೀಪ ಮತ್ತು ತಮಿಳುನಾಡು ಭಾಗದಲ್ಲಿ ಮೇಲ್ಮೈ ಸುಳಿಗಾಳಿ ನಿರ್ಮಾಣ ಹಾಗೂ ಉತ್ತರ ಕರ್ನಾಟಕದಿಂದ ತಮಿಳುನಾಡಿನ ದಕ್ಷಿಣ ಭಾಗದಲ್ಲಿ ಮೋಡಗಳ ಸಾಲು ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಮಳೆ ಮುಂದುವರೆಯುವ ಸಾಧ್ಯತೆ ಇದೆ. ಲಮಳೆಯಾಗುತ್ತಿದೆ  ಹಮಾಮಾನ ಇಲಾಖೆ ಮಾಹಿತಿ ನೀಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

‘ಪ್ರೇಮದ ಊರಲಿ’ ಭರ್ಜರಿ ಕಲೆಕ್ಷನ್: ಬಾಕ್ಸ್ ಆಫೀಸ್‌ನಲ್ಲಿ ಬರೋಬ್ಬರಿ 39 ಕೋಟಿ ರೂ. ಗಳಿಕೆ!

‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?

ನವೆಂಬರ್‌ನಲ್ಲಿ ಕರ್ನಾಟಕ ಬಿಜೆಪಿಗೆ ಮೇಜರ್ ಸರ್ಜರಿ: ಬಿವೈ ವಿಜಯೇಂದ್ರ, ಆರ್ ಅಶೋಕಗೆ ಗೇಟ್ ಪಾಸ್?; ಹೊಸ ಮುಖಗಳಿಗೆ ಮಣೆ!