ಬೆಂಗಳೂರು: ಕಳೆದ ನಾಲ್ಕು ದಿನದಿಂದ ಕರ್ನಾಟಕದ ಹಲವೆಡೆ ಸತತ ಮಳೆಯಾಗುತ್ತಿದ್ದು ಇದು ರಾಜ್ಯದ ಜನತೆಯಲ್ಲಿ ಸಂತಸ ಮೂಡಿಸಿದೆ. ಇನ್ನು ಎರಡು ದಿನ ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಲಕ್ಷದೀಪ ಮತ್ತು ತಮಿಳುನಾಡು ಭಾಗದಲ್ಲಿ ಮೇಲ್ಮೈ ಸುಳಿಗಾಳಿ ನಿರ್ಮಾಣ ಹಾಗೂ ಉತ್ತರ ಕರ್ನಾಟಕದಿಂದ ತಮಿಳುನಾಡಿನ ದಕ್ಷಿಣ ಭಾಗದಲ್ಲಿ ಮೋಡಗಳ ಸಾಲು ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಈ ಭಾರೀ ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದೆ.
ಇನ್ನು ಬೆಂಗಳೂರಿನಲ್ಲಿ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜನರು ತೊಂದರೆಗಳಿಗೆ ಸಿಲುಕಿದ್ದಾರೆ. ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗುತ್ತಿದೆ. ಅಲ್ಲದೆ ರಸ್ತೆ ತುಂಬೆಲ್ಲಾ ನೀರು ಹರಿಯುತ್ತಿರುವುದರಿಂದ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು ಪರದಾಡುವಂತಾಗಿದೆ.
ಈ ಬಾರಿ ಬಿರುಗಾಳಿ ಸಹಿತ ಆಲಿಕಲ್ಲು ಮಳೆಯಾಗುತ್ತಿದೆ. ಮಳೆಯಿಂದಾಗಿ ಹಲವು ಮರಗಳು ಉರುಳಿ ಬಿದ್ದಿವೆ. ಇಂದು ಬೆಂಗಳೂರಿನ ಶಿವಾಜಿನಗರ, ವಿಧಾನಸೌಧ, ವಸಂತನಗರ ಸೇರಿದಂತೆ ವಿವಿದೆಡೆ ಮಳೆಯಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics