ಸಂಗ್ರಹ ಚಿತ್ರ 
ರಾಜ್ಯ

ಖಾತೆ ತೆರೆದ ಪಕ್ಷೇತರರು; ಸವದತ್ತಿ ಯಲ್ಲಮ್ಮದಲ್ಲಿ ಆನಂದ್ ಚೋಪ್ರಾಗೆ ಮುನ್ನಡೆ

ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗುತ್ತಿದ್ದು, ರಾಜಕೀಯ ಪಕ್ಷಗಳ ಅಬ್ಬರದ ನಡುವೆಯೇ ಪಕ್ಷೇತರ ಅಭ್ಯರ್ಥಿಯೊಬ್ಬರು ಮುನ್ನಡೆ ಸಾಧಿಸಿದ್ದಾರೆ.

ಬೆಳಗಾವಿ: ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗುತ್ತಿದ್ದು, ರಾಜಕೀಯ ಪಕ್ಷಗಳ ಅಬ್ಬರದ ನಡುವೆಯೇ ಪಕ್ಷೇತರ ಅಭ್ಯರ್ಥಿಯೊಬ್ಬರು ಮುನ್ನಡೆ ಸಾಧಿಸಿದ್ದಾರೆ.
ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಆನಂದ್ ಚೋಪ್ರಾ ಅವರು ಮುನ್ನಡೆ ಸಾಧಿಸಿದ್ದು, ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಅಭ್ಯರ್ಥಿಗಳು ಹಿನ್ನಡೆ ಸಾಧಿಸಿದ್ದಾರೆ.  ಇನ್ನು ವಿಜಯಪುರದ ಬಬಲೇಶ್ವರ ಕ್ಷೇತ್ರದ ಎರೆಡನೇ ಸುತ್ತಿನ ಮತ ಎಣಿಕೆ ಮಕ್ತಾಯವಾಗಿದ್ದು, ಎರಡರಲ್ಲೂ ಕಾಂಗ್ರೆಸ್​ನ ಎಂ. ಬಿ. ಪಾಟೀಲಗೆ 2024 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ. ಚಿತ್ರದುರ್ಗದ ಮೊಳಕಾಲ್ಮೂರು, ಚಳ್ಳಕೆರೆ ಹಾಗೂ ಹೊಳಲ್ಕೆರೆ ಯಲ್ಲಿ ಬಿಜೆಪಿ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದಾರೆ. ಹೊಸದುರ್ಗ ಕ್ಷೇತ್ರದಲ್ಲಿ ಬಿಜೆಪಿಯ ಗೂಳಿಹಟ್ಟಿ ಶೇಖರ್ ಅಲ್ಪ‌ಮುನ್ನಡೆ ಸಾಧಿಸಿದ್ದು, ಹೊಳಲ್ಕೆರೆಯ ಎಂ.ಚಂದ್ರಪ್ಪ ಮುನ್ನಡೆ ಸಾಧಿಸಿದ್ದಾರೆ. ಇದೇ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆಂಜನೇಯ ಅವರು ಹಿನ್ನಡೆ ಅನುಭವಿಸಿದ್ದಾರೆ.
ಇತ್ತ ಕೊಳ್ಳೆಗಾಲದಲ್ಲಿ ಬಿಎಸ್ ಪಿ ಅಭ್ಯರ್ಥಿ ಮಹೇಶ್ ಅವರೂ ಕೂಡ ಮುನ್ನಡೆ ಸಾಧಿಸಿದ್ದಾರೆ. ಕೊಳ್ಳೆಗಾಲದಲ್ಲಿ ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಹಿನ್ನಡೆ ಸಾಧಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!