ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಿಎಸ್ ವೈ 
ರಾಜ್ಯ

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬಿಎಸ್ ವೈ ಪ್ರಮಾಣ ವಚನ ಸ್ವೀಕಾರ

ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ವಿರೋಧದ ನಡುವೆಯೂ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ಕರ್ನಾಟಕದ ನೂತನ ಮೂಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಬೆಂಗಳೂರು: ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ವಿರೋಧದ ನಡುವೆಯೂ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ಕರ್ನಾಟಕದ ನೂತನ ಮೂಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಬೆಂಗಳೂರಿನ ರಾಜಭವನದ ಆವರಣದಲ್ಲಿರುವ ಗಾಜಿನ ಮನೆಯಲ್ಲಿ ಬಿಎಸ್ ವೈ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದು, ರಾಜ್ಯಪಾಲ ವಜುಭಾಯಿ ವಾಲಾ ಅವರು ಬಿಎಸ್ ವೈಗೆ ಪ್ರತಿಜ್ಞಾ ವಿಧಿ ಬೋಧಿಸಿದರು.
ನೂತನ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ರೈತರು ಮತ್ತು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಆ ಮೂಲಕ ಬಿಎಸ್ ವೈ ಮೂರನೇ ಬಾರಿಗೆ ಮತ್ತು ರಾಜ್ಯದ 23ನೇ ಮುಖ್ಯಮಂತ್ರಿಯಾಗಿ ಬಿಎಸ್ ವೈ ಪದಗ್ರಹಣ ಮಾಡಿದ್ದಾರೆ.  ಈ ವೇಳೆ ರಾಜಭವನದ ಆವರಣದಲ್ಲಿ ಮತ್ತು ರಾಜನಭವನದ ಹೊರಗೆ ನೆರೆದಿದ್ದ ಸಾವಿರಾರು ಬಿಜೆಪಿ ಕಾರ್ಯಕರ್ತರು ಬಿಎಸ್ ವೈ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜೈಕಾರ ಕೂಗಿದರು.
ಇನ್ನು ಪ್ರತಿಜ್ಞಾ ವಿಧಿ ಕಾರ್ಯಕ್ರಮಕ್ಕೆ ಕೇಂದ್ರ ಸಚಿವರಾದ ಪ್ರಕಾಶ್ ಜಾವಡೇಕರ್, ಅನಂತ್ ಕುಮಾರ್, ಡಿವಿ ಸದಾನಂದಗೌಡ, ರಾಜ್ಯ ನಾಯಕರಾದ ಕೆಎಸ್ ಈಶ್ವರಪ್ಪ, ಕಟ್ಟಾ ಸುಬ್ರಮಣ್ಯ ನಾಯ್ಡು ಸೇರಿದಂತೆ ಬಿಜೆಪಿ ಹಲವು ಗಣ್ಯ ನಾಯಕರು ಉಪಸ್ಥಿತರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'24 ಗಂಟೆಯೊಳಗೆ ಬಂಧಿತರ ಬಿಡುಗಡೆ ಮಾಡದಿದ್ದರೆ ನಾನೂ ಪ್ರತಿಭಟನೆ ಮಾಡುತ್ತೇನೆ': ಸೋನಮ್ ವಾಂಗ್‌ಚುಕ್ ಎಚ್ಚರಿಕೆ

ವೀರಶೈವ-ಲಿಂಗಾಯತ ಬೇರೆ ಮಾಡಲು ಹೋದಾಗ ಮಠಾಧೀಶರ ಕ್ಷಮೆ ಕೇಳಿದ್ದೆ: ನಾವು ಸೂಜಿಯಂತೆ ಹೊಲಿಯುವವರೇ ಹೊರತು ಕತ್ತರಿಯಲ್ಲ ಎಂದ ಸಿಎಂ ಡಿಕೆಶಿ

ಡಿಕೆಶಿನೇ ಹೇಳಿದ್ದಾರೆ ನಿನ್ನ ಕ್ಷೇತ್ರಕ್ಕೆ ನಾನೇ ಬಾಸ್ ಅಂತ: ನನ್ನ ಕ್ಷೇತ್ರಕ್ಕೆ ಕೈ ಹಾಕಿದ್ರೆ ಬಿಡಲ್ಲ; MC Sudhakarಗೆ ಪ್ರದೀಪ್ ಪರೋಕ್ಷ ಟಾಂಗ್‌

'SIR ನಿಲ್ಲಲ್ಲ, ಜ್ಞಾನೇಶ್ ಕುಮಾರ್ ಕೂಡ ಹೋಗಲ್ಲ’; ಪ್ರಶ್ನೆ ಏನು ಅಂದ್ರೆ ಪ್ರತಿಭಟನೆಗಳ ಗತಿ ಏನು?: ಪತ್ರಕರ್ತ ಭೂಪೇಂದ್ರ ಚೌಬೆ

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!